ಮಡಿಕೇರಿ | ವಿಧಾನ ಪರಿಷತ್ ಚುನಾವಣೆಗೆ ಮತದಾನ ಮಾಡುವ ವಿಧಾನ ಬಗ್ಗೆ ಮಾಹಿತಿ ನೀಡಿ: ಜಿ.ಪಂ.ಸಿಇಒ

Prasthutha|

ಮಡಿಕೇರಿ: ವಿಧಾನ ಪರಿಷತ್ ಚುನಾವಣೆ ಹಿನ್ನೆಲೆ ಮತದಾನ ಮಾಡುವ ವಿಧಾನದ ಬಗ್ಗೆ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸದಸ್ಯರಿಗೆ ಮಾಹಿತಿ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿ.ಪಂ.ಸಿಇಒ ಭನ್ವರ್ ಸಿಂಗ್ ಮೀನಾ ಸೂಚಿಸಿದ್ದಾರೆ.

- Advertisement -


ನಗರದ ಜಿ.ಪಂ.ಸಿಇಒ ಅವರ ಕಚೇರಿಯಲ್ಲಿ ನಡೆದ ‘ವ್ಯವಸ್ಥಿತ ಮತದಾರರ ಶಿಕ್ಷಣ ಮತ್ತು ಚುನಾವಣಾ ಪಾಲ್ಗೊಳ್ಳುವಿಕೆ (ಸ್ವೀಪ್) ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ವಿಧಾನ ಪರಿಷತ್ ಸ್ಥಳೀಯ ಸಂಸ್ಥೆಗಳ ಚುನಾವಣೆ ಸಂಬಂಧ ಮತದಾನ ಮಾಡುವ ನಿಟ್ಟಿನಲ್ಲಿ, ಸ್ಥಳೀಯ ಮಟ್ಟದಲ್ಲಿ ಅಗತ್ಯ ಮಾಹಿತಿ ನೀಡಬೇಕು. ಮತಹಕ್ಕು ಅಸಿಂಧುವಾಗದಂತೆ ಯಾವ ರೀತಿ ಮತಹಕ್ಕು ಚಲಾಯಿಸಬೇಕು ಎಂಬ ಬಗ್ಗೆ ಮತದಾರರಿಗೆ ಮಾಹಿತಿ ನೀಡುವಂತೆ ಜಿ.ಪಂ.ಸಿಇಒ ನಿರ್ದೇಶನ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಜಿ.ಪಂ.ಉಪ ಕಾರ್ಯದರ್ಶಿ ಲಕ್ಷ್ಮಿ, ಮತ ಹಕ್ಕು ಚಲಾಯಿಸುವ ಸಂಬಂಧ ಚುನಾವಣಾ ಆಯೋಗದ ನಿರ್ದೇಶನದಂತೆ ಮಾಹಿತಿ ನೀಡುವಂತೆ ಸಲಹೆ ಮಾಡಿದರು.


ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜನವರಿ, 01, 2022 ರ ಅರ್ಹತಾ ದಿನಾಂಕದಂತೆ 18 ವರ್ಷ ಮೇಲ್ಪಟ್ಟ ಎಲ್ಲರೂ ಸಹ ಭಾವಚಿತ್ರವಿರುವ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮಾಡಬೇಕು. ಆ ನಿಟ್ಟಿನಲ್ಲಿ ಕಾಲೇಜು ಹಾಗೂ ವಿದ್ಯಾರ್ಥಿನಿಲಯಗಳು ಸೇರಿದಂತೆ ಎಲ್ಲೆಡೆ ವಿಶೇಷ ಅಭಿಯಾನ ಹಮ್ಮಿಕೊಂಡು ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮಾಡಲು ಕ್ರಮವಹಿಸುವಂತೆ ಅಧಿಕಾರಿಗಳಿಗೆ ಜಿ.ಪಂ.ಸಿಇಒ ಸೂಚಿಸಿದರು.

- Advertisement -


ಭಾರತ ಚುನಾವಣಾ ಆಯೋಗವು ಮತದಾರರ ಸಹಾಯವಾಣಿ ಆ್ಯಪ್ ಬಿಡುಗಡೆ ಮಾಡಿದ್ದು, ಅರ್ಹರು ತಮ್ಮ ಮೊಬೈಲ್ ನಲ್ಲಿ ಡೌನ್ ಲೋಡ್ ಮಾಡಿಕೊಂಡು ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮಾಡಬಹುದಾಗಿದೆ. ಆ ನಿಟ್ಟಿನಲ್ಲಿ ಜಾಗೃತಿ ಮೂಡಿಸುವಂತೆ ಭನ್ವರ್ ಸಿಂಗ್ ಮೀನಾ ಹೇಳಿದರು.

Join Whatsapp