ಬಿಬಿಎಂಪಿ ಅಗ್ನಿ ಅವಘಡ ಪ್ರಕರಣ: ಮುಖ್ಯ ಎಂಜಿನಿಯರ್ ಶಿವಕುಮಾರ್ ಸ್ಥಿತಿ ಗಂಭೀರ, ವೆಂಟಿಲೇಟರ್ ಅಳವಡಿಕೆ

Prasthutha|

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕೇಂದ್ರ ಕಚೇರಿಯ ಗುಣಮಟ್ಟ ನಿಯಂತ್ರಣ ಪ್ರಯೋಗಾಲಯದಲ್ಲಿ ಅಗ್ನಿ ಅವಘಡ ಸಂಭವಿಸಿ, ಒಂದು ವಾರ ಕಳೆದಿದ್ದು, ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಕ್ವಾಲಿಟಿ ಕಂಟ್ರೋಲ್ ವಿಭಾಗದ ಮುಖ್ಯ ಇಂಜಿನಿಯರ್ ಶಿವಕುಮಾರ್ ಅವರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗುತ್ತಿದೆ.

- Advertisement -

ಬೆಂಗಳೂರು ವೈದ್ಯಕೀಯ ಕಾಲೇಜು ಸಂಶೋಧನಾ ಸಂಸ್ಥೆ (ಬಿಎಂಸಿಆರ್‌ಐ) ಡೀನ್ ಮತ್ತು ನಿರ್ದೇಶಕ ಡಾ. ರಮೇಶ್ ಕೃಷ್ಣ ಕೂಡ ಶಿವಕುಮಾರ್ ಅವರ ಸ್ಥಿತಿ, ಗಂಭೀರವಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಇತರೆ ಗಾಯಾಳುಗಳ ಆರೋಗ್ಯ ಸ್ಥಿರವಾಗಿದೆ. ಚೇತರಿಸಿಕೊಳ್ಳುತ್ತಿದ್ದಾರೆ. ಆದರೆ, ಶಿವಕುಮಾರ್ ಅವರ ಸ್ಥಿತಿ ಗಂಭೀರವಾಗಿದ್ದು, ವೆಂಟಿಲೇಟರ್ ಅಳವಡಿಸಲಾಗಿದೆ ಎಂದು ಹೇಳಿದ್ದಾರೆ.

- Advertisement -

ಹೆಚ್ಚಿನ ಗಾಯಾಳುಗಳಿಗೆ ಮುಖ ಹಾಗೂ ಕೈಗಳಿಗೆ ಸುಟ್ಟ ಗಾಯಾಗಳಾಗಿವೆ. ಅವರ ಸ್ಥಿತಿ ಸ್ಥಿರವಾಗಿದೆ. ಆಹಾರ ಸೇವನೆ ಮಾಡುತ್ತಿದ್ದಾರೆ. ಆದರೆ, ಶಿವಕುಮಾರ್ ಅವರಿಗೆ ವೆಂಟಿಲೇಟರ್ ಅಳವಡಿಕೆ ಅಗತ್ಯವಿದೆ ಎಂದು ತಿಳಿಸಿದ್ದಾರೆ.

ಸುಟ್ಟ ಗಾಯಗಳಾಗಿರುವುದರಿಂದ, ಗಾಯಗಳ ಸ್ವರೂಪವು ವಿಭಿನ್ನವಾಗಿರುತ್ತದೆ. ಆಳವಾಗಿ ಗಾಯಗಳಾಗಿವೆ. ಗುಣಮುಖರಾಗಲು ಸಮಯ ಬೇಕಾಗುತ್ತದೆ.  ಈ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ತೀವ್ರವಾದ ಗಾಯಗಳಿಗೊಳಗಾದವರಿಗೆ ಚರ್ಮದ ಕಸಿ ಪ್ರಾರಂಭಿಸಲಾಗುತ್ತದೆ ಎಂದು ಹೇಳಿದ್ದಾರೆ.

Join Whatsapp