Home ಟಾಪ್ ಸುದ್ದಿಗಳು ಕೇಂದ್ರದಿಂದ ಬರ ಪರಿಹಾರದಲ್ಲಿ ಅನ್ಯಾಯ: ಕಾಂಗ್ರೆಸ್ ಪ್ರತಿಭಟನೆ

ಕೇಂದ್ರದಿಂದ ಬರ ಪರಿಹಾರದಲ್ಲಿ ಅನ್ಯಾಯ: ಕಾಂಗ್ರೆಸ್ ಪ್ರತಿಭಟನೆ

ಬೆಂಗಳೂರು: ಕೇಂದ್ರ ಸರ್ಕಾರ ಬರ ಪರಿಹಾರ ನೀಡುವ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಅನ್ಯಾಯ ಮಾಡಿದೆ ಎಂದು ವಿಧಾನಸೌಧ ಆವರಣದ ಮಹಾತ್ಮ ಗಾಂಧಿ ಪ್ರತಿಮೆಯ ಮುಂಭಾಗದಲ್ಲಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್, ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಪ್ರತಿಭಟನೆಯ ನೇತೃತ್ವ ವಹಿಸಿದ್ದರು. ಸಚಿವರಾದ ಜಿ. ಪರಮೇಶ್ವರ, ರಾಮಲಿಂಗಾರೆಡ್ಡಿ, ಕೃಷ್ಣಬೈರೇಗೌಡ, ಎನ್‌. ಚಲುವರಾಯಸ್ವಾಮಿ, ದಿನೇಶ್ ಗುಂಡೂರಾವ್, ಕೆ. ಎಚ್. ಮುನಿಯಪ್ಪ, ಶಾಸಕರಾದ ಎಚ್. ಸಿ. ಬಾಲಕೃಷ್ಣ, ರಿಜ್ವಾನ್ ಅರ್ಷದ್ ಮತ್ತಿತರರು ಭಾಗವಹಿಸಿದರು.

ರಾಜ್ಯದ 223 ತಾಲ್ಲೂಕುಗಳನ್ನು ಬರಪೀಡಿತ ಎಂದು 2023ರ ಸೆ. 13ರಂದೇ ಘೋಷಿಸಲಾಗಿದೆ. ಈಗ ಏಳು ತಿಂಗಳುಗಳಾಗುತ್ತಾ ಬಂತು. 48 ಲಕ್ಷ ಹೆಕ್ಟೇರ್ ನಲ್ಲಿ ಬೆಳೆ ಹಾನಿಯಾಗಿದೆ. ಇದರಿಂದಾಗಿ ₹ 35,162 ಕೋಟಿ ನಷ್ಟವಾಗಿದೆ. ಕೇಂದ್ರ ಸರ್ಕಾರದಿಂದ ಪರಿಹಾರ ಕೇಳಿರುವುದು ಹೆಚ್ಚು ಕಡಿಮೆ ಅದರ ಅರ್ಧದಷ್ಟು ಅಂದರೆ ₹ 18,171 ಕೋಟಿ. ಉಳಿದ ಹಣವನ್ನು ರಾಜ್ಯ ಸರ್ಕಾರ ತನ್ನ ಸಂಪನ್ಮೂಲದಿಂದಲೆ ಭರಿಸುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಆದರೆ ಈಗ ಬಿಡುಗಡೆಯಾಗಿರುವುದು 3,454 ಕೋಟಿ ರೂಪಾಯಿ ಮಾತ್ರ. ಉಳಿದ ಪರಿಹಾರಕ್ಕಾಗಿ ನಮ್ಮ ಹೋರಾಟ ಮುಂದುವರಿಯಲಿದೆ ಎಂದು ಸಿಎಂ ಇದೇ ಸಂದರ್ಭ ತಿಳಿಸಿದರು.

Join Whatsapp
Exit mobile version