ಇನ್ನು ಮುಂದೆ ಬಡವರ, ದೀನದಲಿತರ ಉದ್ಧಾರಕ್ಕಾಗಿ ಶ್ರಮಿಸುವೆ: ಆರ್ಯನ್‌ ಖಾನ್

Prasthutha: October 17, 2021

ಮುಂಬೈ: ಡ್ರಗ್ಸ್‌ ಕೇಸ್ ನಲ್ಲಿ ಬಂಧನಕ್ಕೊಳಗಾಗಿರುವ, ಬಾಲಿವುಡ್‌ ನಟ ಶಾರುಖ್‌ ಖಾನ್‌ ಪುತ್ರ ಆರ್ಯನ್‌ ಖಾನ್‌ ಗೆ ಶನಿವಾರ, ಎನ್‌ ಸಿಬಿ ಕಚೇರಿಯಲ್ಲಿ ಆರ್ಯನ್‌ ಗೆ ಮಾದಕ ವಸ್ತುಗಳ ಬಳಕೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಆಪ್ತ ಸಮಾಲೋಚನೆ ನಡೆಸಲಾಯಿತು.


ಅಧಿಕಾರಿಗಳು, ತಜ್ಞರು ನೀಡಿದ ಸಲಹೆ ಸ್ವೀಕರಿಸಿದ ಆರ್ಯನ್‌, ಮುಂದೆ ತನ್ನೆಲ್ಲಾ ದುಶ್ಚಟಗಳನ್ನು ಬಿಡುವುದಾಗಿ ವಾಗ್ಧಾನ ನೀಡಿದ್ದಾನೆ. ಮುಂದಿನ ದಿನಗಳಲ್ಲಿ ತಾನು ಸಮಾಜದ ಬಡವರ, ದೀನದಲಿತರ ಉದ್ಧಾರಕ್ಕಾಗಿ ಶ್ರಮಿಸುವುದಾಗಿ ತಿಳಿಸಿದ್ದಾನೆ. ಜತೆಗೆ, ಡ್ರಗ್ಸ್‌ ಪ್ರಕರಣ ಭೇದಿಸಿರುವ ಎನ್‌ ಸಿಬಿ ಪ್ರಾಂತೀಯ ಆಯುಕ್ತ ಸಮೀರ್‌ ವಾಂಖೆಡೆಯವರೇ ಮುಂದೊಂದು ದಿನ ತಮ್ಮನ್ನು ಮೆಚ್ಚಿಕೊಳ್ಳುವಂಥ ಕಾರ್ಯ ಮಾಡುವುದಾಗಿ ತಿಳಿಸಿದ್ದಾನೆ

ಐಷಾರಾಮಿ ಹಡಗಿನಲ್ಲಿ ಡ್ರಗ್ಸ್ ಪಾರ್ಟಿ ಮಾಡಿದ ಆರೋಪದ ಮೇಲೆ.ಎನ್ ಸಿಬಿ ಅಧಿಕಾರಿಗಳು ಆತನನ್ನು ಬಂಧಿಸಿದ್ದು, ಸದ್ಯ ನ್ಯಾಯಾಂಗ ಬಂಧನದಲ್ಲಿ ಇರಿಸಲಾಗಿದೆ.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!