ನವದೆಹಲಿ: ಮನ್ ಕಿ ಬಾತ್’ನ 91 ನೇ ಆವೃತ್ತಿಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಭಾರತದ ಸ್ವಾತಂತ್ರ್ಯದ 75 ನೇ ವರ್ಷವನ್ನು ಆಚರಿಸಲು ‘ಹರ್ ಘರ್ ತಿರಂಗಾ’ ಅಭಿಯಾನದ ಅಡಿಯಲ್ಲಿ ಆಗಸ್ಟ್ 2 ರಿಂದ 15 ರವರೆಗೆ ಜನರು ತಮ್ಮ ಸಾಮಾಜಿಕ ಮಾಧ್ಯಮಗಳ ಪ್ರೊಫೈಲ್ ಚಿತ್ರಗಳಲ್ಲಿ ತ್ರಿವರ್ಣ ಧ್ವಜವನ್ನು ಅಳವಡಿಸಿ ಎಂದು ಹೇಳಿದ್ದಾರೆ
ಆಜಾದಿ ಕಾ ಅಮೃತ ಮಹೋತ್ಸವದ ಅಡಿಯಲ್ಲಿ, ಆಗಸ್ಟ್ 13 ರಿಂದ 15 ರವರೆಗೆ, ಹರ್ ಘರ್ ತಿರಂಗಾ ಎಂಬ ವಿಶೇಷ ಆಂದೋಲನವನ್ನು ಆಯೋಜಿಸಲಾಗುತ್ತಿದೆ. ಆಗಸ್ಟ್ 2 ರಿಂದ 15 ರವರೆಗೆ, ನಾವೆಲ್ಲರೂ ನಮ್ಮ ಸಾಮಾಜಿಕ ಮಾಧ್ಯಮ ಪ್ರೊಫೈಲ್ ಚಿತ್ರಗಳಲ್ಲಿ ತ್ರಿವರ್ಣ ಧ್ವಜವನ್ನು ಇಡೋಣ ಎಂದು ಮೋದಿ ಹೇಳಿದರು.
ಆಗಸ್ಟ್ 2 ನೇ ದಿನಾಂಕಕ್ಕೆ ತ್ರಿವರ್ಣ ಧ್ವಜದೊಂದಿಗೆ ವಿಶೇಷ ಸಂಬಂಧವಿದೆ ಎಂದು ಪ್ರಧಾನಿ ಹೇಳಿದರು. ಆಗಸ್ಟ್ 2 ನೇ ದಿನ ನಮ್ಮ ರಾಷ್ಟ್ರಧ್ವಜವನ್ನು ವಿನ್ಯಾಸಗೊಳಿಸಿದ ಪಿಂಗಲಿ ವೆಂಕಯ್ಯ ಅವರ ಜನ್ಮದಿನವಾಗಿದೆ. ಎಂದು ಅವರು ಹೇಳಿದರು.