ಸೋಶಿಯಲ್ ಮೀಡಿಯಾ ಪ್ರೊಫೈಲ್ ಚಿತ್ರದಲ್ಲಿ ತ್ರಿವರ್ಣ ಧ್ವಜವನ್ನು ಅಳವಡಿಸಿ: ಪ್ರಧಾನಿ ಮೋದಿ

Prasthutha|

ನವದೆಹಲಿ: ಮನ್ ಕಿ ಬಾತ್’ನ 91 ನೇ ಆವೃತ್ತಿಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಭಾರತದ ಸ್ವಾತಂತ್ರ್ಯದ 75 ನೇ ವರ್ಷವನ್ನು ಆಚರಿಸಲು ‘ಹರ್ ಘರ್ ತಿರಂಗಾ’ ಅಭಿಯಾನದ ಅಡಿಯಲ್ಲಿ ಆಗಸ್ಟ್ 2 ರಿಂದ 15 ರವರೆಗೆ ಜನರು ತಮ್ಮ ಸಾಮಾಜಿಕ ಮಾಧ್ಯಮಗಳ ಪ್ರೊಫೈಲ್ ಚಿತ್ರಗಳಲ್ಲಿ  ತ್ರಿವರ್ಣ ಧ್ವಜವನ್ನು ಅಳವಡಿಸಿ ಎಂದು ಹೇಳಿದ್ದಾರೆ

- Advertisement -

ಆಜಾದಿ ಕಾ ಅಮೃತ ಮಹೋತ್ಸವದ ಅಡಿಯಲ್ಲಿ, ಆಗಸ್ಟ್ 13 ರಿಂದ 15 ರವರೆಗೆ, ಹರ್ ಘರ್ ತಿರಂಗಾ ಎಂಬ ವಿಶೇಷ ಆಂದೋಲನವನ್ನು ಆಯೋಜಿಸಲಾಗುತ್ತಿದೆ. ಆಗಸ್ಟ್ 2 ರಿಂದ 15 ರವರೆಗೆ, ನಾವೆಲ್ಲರೂ ನಮ್ಮ ಸಾಮಾಜಿಕ ಮಾಧ್ಯಮ ಪ್ರೊಫೈಲ್ ಚಿತ್ರಗಳಲ್ಲಿ ತ್ರಿವರ್ಣ ಧ್ವಜವನ್ನು ಇಡೋಣ ಎಂದು ಮೋದಿ ಹೇಳಿದರು.

ಆಗಸ್ಟ್ 2 ನೇ ದಿನಾಂಕಕ್ಕೆ ತ್ರಿವರ್ಣ ಧ್ವಜದೊಂದಿಗೆ ವಿಶೇಷ ಸಂಬಂಧವಿದೆ ಎಂದು ಪ್ರಧಾನಿ ಹೇಳಿದರು. ಆಗಸ್ಟ್ 2 ನೇ ದಿನ ನಮ್ಮ ರಾಷ್ಟ್ರಧ್ವಜವನ್ನು ವಿನ್ಯಾಸಗೊಳಿಸಿದ ಪಿಂಗಲಿ ವೆಂಕಯ್ಯ ಅವರ ಜನ್ಮದಿನವಾಗಿದೆ. ಎಂದು ಅವರು ಹೇಳಿದರು.

Join Whatsapp