Home ಟಾಪ್ ಸುದ್ದಿಗಳು ಮೈಸೂರು ಅರಮನೆ ಬಳಿ ರಾತ್ರೋರಾತ್ರಿ ಪ್ರತಿಮೆ ಪ್ರತಿಷ್ಠಾಪನೆ

ಮೈಸೂರು ಅರಮನೆ ಬಳಿ ರಾತ್ರೋರಾತ್ರಿ ಪ್ರತಿಮೆ ಪ್ರತಿಷ್ಠಾಪನೆ

ಮೈಸೂರು: ಅರಮನೆ ಹತ್ತಿರ ರಾತ್ರೋರಾತ್ರಿ ಮತ್ತೊಂದು ಪ್ರತಿಮೆ ಪ್ರತಿಷ್ಠಾಪನೆ ಮಾಡಲಾಗಿದೆ. ಗನ್‌ಹೌಸ್ ವೃತ್ತದಲ್ಲಿ ಲಿಂಗೈಕ್ಯ ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ಪ್ರತಿಮೆಯನ್ನು ರಾತ್ರೋರಾತ್ರಿ ಕಾನೂನು ಉಲ್ಲಂಘಿಸಿ ಪ್ರತಿಷ್ಠಾಪನೆ ಮಾಡಲಾಗಿದೆ.

ವಾಸ್ತವದಲ್ಲಿ ಪಾರಂಪರಿಕ ಕಟ್ಟಡ ಸಮೀಪ ಪ್ರತಿಮೆ ನಿರ್ಮಾಣಕ್ಕೆ ಅವಕಾಶ ಇಲ್ಲ. ಈ ಹಿಂದೆ ಜಿಲ್ಲಾಡಳಿತ, ಸುತ್ತೂರು ಮಠದ ನಡುವೆ ಪತ್ರ ವ್ಯವಹಾರ ನಡೆದಿತ್ತು. ಇದೀಗ ಏಕಾಏಕಿ ಖಾಲಿ ತಳಹದಿ ಮೇಲೆ ಪ್ರತಿಮೆ ಪ್ರತಿಷ್ಠಾಪನೆ ಮಾಡಲಾಗಿದ್ದು, ಜನರ ಹುಬ್ಬೇರುವಂತೆ ಮಾಡಿದೆ.

ಕ್ರೇನ್ ಮೂಲಕ ಪ್ರತಿಮೆ ತಂದು ನಿಲ್ಲಿಸಿದ್ದಾರೆ. ಹಲವು ವರ್ಷಗಳಿಂದ ವಿವಾದವಾಗಿ ಉಳಿದಿದ್ದ ಪ್ರತಿಮೆ ನಿರ್ಮಾಣ ವಿಚಾರ ಮುಂದಿನ ದಿನಗಳಲ್ಲಿ ವಿವಾದ ಆಗುವ ಸಾಧ್ಯತೆ ಇದೆ.

ಪ್ರತಿಮೆ ಪ್ರತಿಷ್ಠಾಪನೆ ವಿಚಾರವಾಗಿ ಕೆಲವರಿಂದ ವಿರೋಧ ವ್ಯಕ್ತವಾಗಿದ್ದು, ಅನಧಿಕೃತವಾಗಿ ಪ್ರತಿಮೆ ನಿಲ್ಲಿಸಿರುವುದರಿಂದ ಕೂಡಲೇ ತೆರವು ಮಾಡಬೇಕು ಎಂದು ಅರಸು ಸಮುದಾಯ ಮುಖಂಡರು ಪ್ರತಿಭಟನೆ ನಡೆಸಿದ್ದಾರೆ.

Join Whatsapp
Exit mobile version