ಬೆಂಗಳೂರು: ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಪೂರ್ವಭಾವಿ ಪರೀಕ್ಷೆಗಳನ್ನು ನಡೆಸಲು ಪ್ರತಿ ವಿದ್ಯಾರ್ಥಿಯಿಂದ 50 ರೂ.ಗಳನ್ನು ಸಂಗ್ರಹಿಸುವಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸೂಚಿಸಿರುವುದಕ್ಕೆ ವಿದ್ಯಾರ್ಥಿಗಳು ಮತ್ತು ಪೋಷಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕ್ಷೇತ್ರ ಶಿಕ್ಷಣಾಧಿಕಾರಿಗಳ ಹಂತದಿಂದ ಪ್ರಶ್ನೆ ಪತ್ರಿಕೆಗಳನ್ನು ಸಿದ್ಧಪಡಿಸುವುದರ ಬದಲಾಗಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಹಂತದಲ್ಲಿ ವಾರ್ಷಿಕ ಪರೀಕ್ಷೆಯ ಮಾದರಿಯಲ್ಲಿ ಪ್ರಶ್ನೆ ಪತ್ರಿಕೆಗಳನ್ನು ಸಿದ್ಧಪಡಿಸಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಲಾಗಿನ್’ಗೆ ಕಳುಹಿಸಲು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಹಂತದಲ್ಲಿ ಮುದ್ರಿಸಿ, ಪೂರ್ವಭಾವಿ ಪರೀಕ್ಷೆಗಳನ್ನು ನಡೆಸಲು ಅಗತ್ಯ ಕ್ರಮ ಕೈಗೊಳ್ಳಲು ಸೂಚಿಸಿದೆ. ಪ್ರತಿ ವಿದ್ಯಾರ್ಥಿಯಿಂದ 60 ರೂ.ಬದಲಾಗಿ 50 ರೂ. ಸಂಗ್ರಹಿಸಬೇಕು ಎಂದು ಸಚಿವ ಬಿ.ಸಿ.ನಾಗೇಶ್ ಸೂಚಿಸಿದ್ದರು.
ಎಸ್.ಎಸ್.ಎಲ್. ಸಿ ವಿದ್ಯಾರ್ಥಿಗಳ ಪೂರ್ವ ಸಿದ್ಧತಾ ಪರೀಕ್ಷೆ ನಡೆಸಿದಷ್ಟು ಬರ್ಬಾದ್ ಆಗಿರುವ ರಾಜ್ಯ ಬಿಜೆಪಿ ಸರ್ಕಾರ, ರಾಜ್ಯದ ಸರ್ಕಾರಿ ಶಾಲೆಯಲ್ಲಿ ಅನಿಲ್ ಅಂಬಾನಿ, ಮುಕೇಶ್ ಅಂಬಾನಿ ಮತ್ತು ಅದಾನಿ ಮಕ್ಕಳು ಓದುತ್ತಿರಬೇಕು ಅನ್ಕೊಂಡಿರುವ ದರಿದ್ರ ಸರ್ಕಾರ ಎಂದು ನೆಟ್ಟಿಗರು ಕಿಡಿಕಾರಿದ್ದಾರೆ.