ಅಹಮದಾಬಾದ್: ಮುಂಬರುವ ಗುಜರಾತ್ ಅಸೆಂಬ್ಲಿ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಭೂಪೇಂದ್ರ ಪಟೇಲ್ ಅವರನ್ನು ಕಾರಿಗೆ ಹತ್ತಿಸದೆ ಅಲ್ಪ ದೂರ ನಡೆಯುವಂತೆ ಮಾಡುವ ಮೂಲಕ ಪ್ರಧಾನಿ ಮೋದಿ ಅವರು ಅವಮಾನ ಮಾಡಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ.
ಜನರಿಗೆ ಕೈ ಬೀಸುತ್ತಾ ಕಾರನ್ನು ಏರಲು ಭೂಪೇಂದ್ರ ಪಟೇಲ್ ಅವರು ಪ್ರಯತ್ನಿಸುತ್ತಿರುವುದು ವೀಡಿಯೋ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಆದರೆ ಕಾರನ್ನು ನಿಲ್ಲಿಸದೆ ಮುಂದಕ್ಕೆ ಕೊಂಡೊಯ್ಯಲಾಗಿದ್ದು, ಚಲಿಸುವ ಕಾರಿನ ಜೊತೆ ಮುಖ್ಯಮಂತ್ರಿ ಪಟೇಲ್ ಅವರು ಅಲ್ಪ ದೂರ ನಡೆದುಕೊಂಡು ಹೋಗುತ್ತಿರುವುದು ವೈರಲ್ ವೀಡಿಯೋದಲ್ಲಿ ಕಾಣಬಹುದಾಗಿದೆ.
ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರಿಗೆ ಅವಮಾನ ಮಾಡಲಾಗಿದೆ. ರಾಜ್ಯದ ಮುಖ್ಯಮಂತ್ರಿಯ ಜೊತೆ ಈ ರೀತಿ ವರ್ತಿಸುವುದು ಖಂಡನೀಯ. ಇದು ಮುಖ್ಯಮಂತ್ರಿ ಹುದ್ದೆಗೆ ಮತ್ತು ಗುಜರಾತ್ ಜನರಿಗೆ ಮಾಡಿದ ಅವಮಾನವಾಗಿದೆ ಎಂದು ಪ್ರತಿಕ್ರಿಯಿಸಿದ ಪ್ರತಿಪಕ್ಷ ಕಾಂಗ್ರೆಸ್ ವಕ್ತಾರೆ ಶಮಾ ಮುಹಮ್ಮದ್, ಒಬ್ಬ ಮುಖ್ಯಮಂತ್ರಿಯನ್ನು ಈ ರೀತಿ ನಡೆಸಿಕೊಳ್ಳುವುದಾದರೆ ಸಾಮಾನ್ಯ ಜನರ ಪಾಡೇನು ಎಂದು ಪ್ರಶ್ನಿಸಿದ್ದಾರೆ.