Home ಟಾಪ್ ಸುದ್ದಿಗಳು ತಾಯ್ನಾಡಿಗೆ ಮರಳಲು ಶೌಚಾಲಯ ಶುಚಿಗೊಳಿಸಲು ರಾಯಭಾರಿ ಕಚೇರಿಯಿಂದ ಬಲವಂತ: ರಾಹುಲ್ ಗಾಂಧಿ ಕಿಡಿ

ತಾಯ್ನಾಡಿಗೆ ಮರಳಲು ಶೌಚಾಲಯ ಶುಚಿಗೊಳಿಸಲು ರಾಯಭಾರಿ ಕಚೇರಿಯಿಂದ ಬಲವಂತ: ರಾಹುಲ್ ಗಾಂಧಿ ಕಿಡಿ

ನವದೆಹಲಿ: ಯುದ್ಧಪೀಡಿತ ಉಕ್ರೇನ್ ನಿಂದ ಭಾರತಕ್ಕೆ ಮರಳುವಂತಾಗಲು ಶೌಚಾಲಯಗಳನ್ನು ಸ್ವಚ್ಛಗೊಳಿಸುವಂತೆ ಸಂತ್ರಸ್ತ ವಿದ್ಯಾರ್ಥಿಗಳಿಗೆ ಭಾರತೀಯ ರಾಯಭಾರಿ ಕಚೇರಿ ಸೂಚಿಸಿದೆ ಎಂದು ಸಂತ್ರಸ್ತರು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ. ಈ ಕುರಿತು ಮಾಧ್ಯಮಗಳಲ್ಲಿ ವರದಿಯಾಗಿದ್ದು, ಇದಕ್ಕೆ ಖಾರವಾಗಿ ಪ್ರತಿಕ್ರಿಯಿಸಿದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ರಾಯಭಾರಿ ಕಚೇರಿಯ ನಡೆ ಇಡೀ ದೇಶಕ್ಕೆ ಮಾಡಿದ ಅವಮಾನ ಎಂದು ಬಣ್ಣಿಸಿದ್ದಾರೆ.

ಭಾರತೀಯ ರಾಯಭಾರಿ ಕಚೇರಿಯ ಅಧಿಕಾರಿಗಳು ಭಾರತೀಯ ವಿದ್ಯಾರ್ಥಿಗಳಿಂದ ಇಂತಹ ಕೃತ್ಯ ಮಾಡಿಸಿರುವುದು ಇಡೀ ದೇಶಕ್ಕೆ ಅವಮಾನ ಮತ್ತು ಭಾರತ ಜಾಗತಿಕವಾಗಿ ತಲೆತಗ್ಗಿಸುವಂತಾಗಿದೆ ಎಂದು ರಾಹುಲ್ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಾತ್ರವಲ್ಲ ಅಪರೇಶನ್ ಗಂಗಾದ ಈ ಕಹಿ ಸತ್ಯವು ಮೋದಿ ಸರ್ಕಾರ ನೈಜ ಮುಖವನ್ನು ಅನಾವರಣಗೊಳಿಸಿದೆ ಎಂದು ಟ್ವೀಟ್ ಮೂಲಕ ಪ್ರತಿಕ್ರಿಯಿಸಿದ್ದಾರೆ.

ಸದ್ಯ ಭಾರತೀಯ ರಾಯಭಾರು ಕಚೇರಿ ಭಾರತದ ವಿದ್ಯಾರ್ಥಿಗಳನ್ನು ಶೌಚಾಲಯ ಸ್ವಚ್ಛಗೊಳಿಸುವಂತೆ ಸೂಚಿಸಲಾಗಿದೆ ಎಂಬ ಮಾಧ್ಯಮ ವರದಿಗಳನ್ನು ಉಲ್ಲೇಖಿಸಿ ರಾಹುಲ್ ಗಾಂಧಿ ಅವರು ಟ್ವೀಟ್ ಮೂಲಕ ನಡೆಯನ್ನು ಕಟು ಶಬ್ದಗಳಿಂದ ಖಂಡಿಸಿದ್ದು, ಸಂತ್ರಸ್ತರನ್ನು ಸ್ಥಳಾಂತರಿಸುವುದು ಕೇಂದ್ರ ಸರ್ಕಾರದ ಕರ್ತವ್ಯವೇ ಹೊರತು ಔದಾರ್ಯವಲ್ಲ ಎಂದು ಕೇಂದ್ರದ ವಿರುದ್ಧ ಕಿಡಿಕಾರಿದ್ದಾರೆ.

Join Whatsapp
Exit mobile version