ನವದೆಹಲಿ: ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ಅವರ ಪಾರ್ಥಿವ ಶರೀರಕ್ಕೆ ಗೌರವ ಸಲ್ಲಿಸಿದ ಸಂದರ್ಭದಲ್ಲಿ ರಾಷ್ಟ್ರಧ್ವಜವನ್ನು ಅವಮಾನಿಸಿದ ಆರೋಪದ ಮೇಲೆ ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಚಂದ್ರ ಕಿಶೋರ್ ಪರಾಶರ್ ಅವರು ಮುಜಫರ್ ಪುರ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಶವಸಂಸ್ಕಾರಕ್ಕೂ ಮೊದಲು ಕಲ್ಯಾಣ್ ಸಿಂಗ್ ಅವರ ಪಾರ್ಥಿವ ಶರೀರದ ಮೇಲೆ ತ್ರಿವರ್ಣ ಧ್ವಜ ಹಾಕಲಾಗಿತ್ತು. ಬಳಿಕ ಅದರ ಮೇಲೆ ಬಿಜೆಪಿ ಧ್ವಜವನ್ನು ಇರಿಸುವ ಮೂಲಕ ನಡ್ಡಾ ರಾಷ್ಟ್ರಧ್ವಜಕ್ಕೆ ಅಗೌರವ ತೋರಿದ್ದಾರೆ ಎಂದು ಅವರು ಆರೋಪಿಸಿದರು.
ಬಿಜೆಪಿ ಅದನ್ನು ಉದ್ದೇಶಪೂರ್ವಕವಾಗಿ ಮಾಡಿದೆ. ನಡ್ಡಾ ಅವರ ಕೃತ್ಯವು ರಾಷ್ಟ್ರಧ್ವಜಕ್ಕೆ ಮಾಡಿದ ಅವಮಾನವಾಗಿದೆ ಎಂದು ಅರ್ಜಿದಾರರು ತಿಳಿಸಿದ್ದಾರೆ.
ನ್ಯಾಯಾಲಯವು ಪ್ರಕರಣದ ವಿಚಾರಣೆಗೆ ದಿನಾಂಕವನ್ನು ನಿಗದಿಪಡಿಸಿಲ್ಲ.