ಪುತ್ತೂರು: ರಾಷ್ಟ್ರಪಿತ ಮಹಾತ್ಮ ಗಾಂಧೀಜಿಗೆ ಅವಮಾನ| ತಪ್ಪಿತಸ್ಥರ ಶೀಘ್ರ ಬಂಧನಕ್ಕೆ SDPI ಒತ್ತಾಯ

Prasthutha|

ಪುತ್ತೂರು: ನಗರದ KSRTC ಬಸ್ ನಿಲ್ದಾಣದ ಬಳಿಯಿರುವ ಗಾಂಧಿ ಪ್ರತಿಮೆಯ ಕನ್ನಡಕವನ್ನು ತೆಗೆದು ಮತ್ತು ಟೀ ಶರ್ಟ್ ನ್ನು ತಲೆಗೆ ಇಟ್ಟು ಅವಮಾನ ಮಾಡಿದ ತಪ್ಪಿತಸ್ಥರನ್ನ ಶೀಘ್ರವೇ ಬಂಧಿಸಬೇಕೆಂದು SDPI ಒತ್ತಾಯಿಸಿದೆ.

- Advertisement -

ಈ ಕುರಿತು ಪ್ರತಿಕ್ರಿಯಿಸಿದ ಪುತ್ತೂರು ವಿಧಾನಸಭಾ ಕ್ಷೇತ್ರಾಧ್ಯಕ್ಷ ಸಿದ್ದೀಕ್ ಕೆ.ಎ, ರಾಜ್ಯದ ಹಲವು ಕಡೆ ಈ ಹಿಂದೆಯು ಇಂತಹ ಘಟನೆಗಳು ನಡೆದು ಗಾಂಧೀಜಿ, ಸಂವಿಧಾನ ಶಿಲ್ಪಿ ಅಂಬೇಡ್ಕರ್ ರವರ ಪ್ರತಿಮೆಗಳನ್ನು ಹಾನಿಗೊಳಿಸಿದ ಮತ್ತು ಧ್ವಂಸಗೊಳಿಸಿದ ಘಟನೆಗಳು ನಡೆದಿದೆ, ಅಂತಹದೇ ಮನಸ್ಥಿತಿಯ ತಂಡದಿಂದ ಈ ಕೃತ್ಯವು ನಡೆದಿರುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.

ಇಂದು ಪ್ರತಿಮೆಗೆ ಅವಮಾನ ಮಾಡಿದ ಕಿಡಿಗೇಡಿಗಳನ್ನು ಬಂಧಿಸದೆ ಇದ್ದಲ್ಲಿ ಮುಂದಿನ ದಿನಗಳಲ್ಲಿ ಪ್ರತಿಮೆಯನ್ನು ಧ್ವಂಸಗೊಳಿಸಿ ಪುತ್ತೂರಿನ ಶಾಂತಿಯನ್ನು ಭಂಗಗೊಳಿಸುವ ಸಾಧ್ಯತೆ ಕೂಡ ಇದೆ. ಗಾಂಧಿಯನ್ನು ಕೊಂದ ನಾಥೂರಾಮ್ ಗೋಡ್ಸೆಯನ್ನು ಆರಾಧಿಸುವ ಒಂದು ವರ್ಗ ಇಲ್ಲಿ ಕಾರ್ಯಾಚರಿಸುತ್ತಿರುವಾಗ ಈ ಪ್ರಕರಣವನ್ನು ಪೋಲಿಸ್ ಇಲಾಖೆ ಗಂಭೀರವಾಗಿ ಪರಿಗಣಿಸಿ ನಗರದಲ್ಲಿ ಅಳವಡಿಸಿರುವ ಸಿಸಿ ಕೆಮರಾಗಳನ್ನು ಪರಿಶೀಲಿಸಿ ತಪ್ಪಿತಸ್ಥರ ವಿರುದ್ಧ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿ ಕೂಡಲೇ ಬಂಧಿಸಬೇಕೆಂದು ಅವರು ಆಗ್ರಹಿಸಿದ್ದಾರೆ.

- Advertisement -

ಅದೇ ರೀತಿ ಆರೋಪಿಗಳನ್ನು ಪೊಲೀಸರು ಶೀಘ್ರವೇ ಬಂಧಿಸದೇ ಇದ್ದಲ್ಲಿ ಗಾಂಧಿ ಪ್ರತಿಮೆಯ ಮುಂಭಾಗದಲ್ಲೇ SDPI ಪ್ರತಿಭಟನೆಯನ್ನು ಹಮ್ಮಿಕೊಳ್ಳಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.

Join Whatsapp