ಸಂವಿಧಾನ ಶಿಲ್ಪಿಗೆ ಅವಮಾನ ಮಾಡುವುದು ಅತ್ಯಂತ ನೀಚ ಕೃತ್ಯ: ಧ್ರುವನಾರಾಯಣ

Prasthutha: January 28, 2022

ಬೆಂಗಳೂರು: ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಅವಮಾನ ಮಾಡುವುದು ಅತ್ಯಂತ ನೀಚ ಕೃತ್ಯ ಎಂದು ಮಾಜಿ ಸಂಸದ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವನಾರಾಯಣ ಹೇಳಿದ್ದಾರೆ

ಗಣರಾಜ್ಯೋತ್ಸವದ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಡಾ.ಬಿ.ಆರ್. ಅಂಬೇಡ್ಕರ ಭಾವಚಿತ್ರವನ್ನು ತೆಗೆಯುವಂತೆ ಹೇಳಿದ ನ್ಯಾಯಾಧೀಶರ ವಿರುದ್ಧ ಟ್ವೀಟ್ ಮಾಡಿರುವ ಅವರು,  ಈ ಹಿಂದೆ ಗಣರಾಜ್ಯೋತ್ಸದ ದಿನವನ್ನು ಕಾನೂನು ದಿನ ಎಂದು ಪರಿಗಣಿಸಲಾಗಿತ್ತು. ಈಗ ಇದನ್ನು ಸಂವಿಧಾನದ ದಿನ ಎಂದು ಘೋಷಿಸಲಾಗಿದೆ. ಇಂತಹ ಸಂದರ್ಭದಲ್ಲಿ ನ್ಯಾಯಾಂಗದ ಮೂಗಿನ ಕೆಳಗೆ ಸಂವಿಧಾನ ಶಿಲ್ಪಿಗೆ ಅವಮಾನ ಮಾಡುವುದು ಅತ್ಯಂತ ನೀಚತನದ ಕೃತ್ಯವಾಗಿದ್ದು, ತಮ್ಮ ಜೀವನದ ಉದ್ದಕ್ಕೂ ಪಡೆದ ಜ್ಞಾನವನ್ನು ಧಾರೆ ಎರೆದು, ಕಠಿಣ ಪರಿಶ್ರಮ ಮತ್ತು ಶ್ರದ್ಧೆಯಿಂದ ಭಾರತಕ್ಕೆ ಸಂವಿಧಾನ ಬರೆದ ವಿಶ್ವಜ್ಞಾನಿ ಡಾ. ಅಂಬೇಡ್ಕರ್ ಅವರನ್ನು ಅವಮಾನಿಸುವುದು ದೇಶ ದ್ರೋಹಕ್ಕೆ ಸಮಾನ ಎಂದು ಟೀಕಿಸಿದ್ದಾರೆ.

ಸರಕಾರ ತನ್ನ ಆದೇಶದಲ್ಲಿ ಎಲ್ಲ ಶಾಲಾ ಕಾಲೇಜುಗಳಲ್ಲಿ ಗಣರಾಜ್ಯೋತ್ಸವ ಅಚರಣೆ ವೇಳೆ ಡಾ. ಅಂಬೇಡ್ಕರ್ ಭಾವಚಿತ್ರ ಕಡ್ಡಾಯಗೊಳಿಸಿದ್ದು ಆದರೆ, ಸರಕಾರಿ ಕಚೇರಿ, ನ್ಯಾಯಾಲಯದ ಆವರಣ, ಸಾರ್ವಜನಿಕ ಸ್ಥಳಗಳಲ್ಲಿ ಆಚರಿಸುವ ಬಗ್ಗೆ ಸ್ಪಷ್ಟತೆ ಇಲ್ಲ. ಸರಕಾರದ ಆದೇಶದಲ್ಲಿ ಗೊಂದಲ ಗಣರಾಜ್ಯೋತ್ಸವ ಆಚರಣೆ ವೇಳೆ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಭಾವಚಿತ್ರ ಅನಾವರಣ ಕಡ್ಡಾಯಗೊಳಿಸಿ 2020ರಲ್ಲಿ ರಾಜ್ಯ ಸರಕಾರ ಹೊರಡಿಸಿದ ಆದೇಶದಲ್ಲಿ ಗೊಂದಲ ಇದೆ ಎಂದರು.


ಗಣರಾಜ್ಯೋತ್ಸವದ ಆಚರಣೆ ವೇಳೆ ಸಂವಿಧಾನ ಶಿಲ್ಪಿ ಡಾ. ಅಂಬೇಡ್ಕರ್ ಭಾವಚಿತ್ರ ಕಡ್ಡಾಯ ಆದೇಶ ರಾಜ್ಯ ಉಚ್ಛ ನ್ಯಾಯಾಲಯದ ಪೂರ್ಣ ಪೀಠದ ಮುಂದೆ ವಿಚಾರಣೆ ಬಾಕಿ ಇರುವುದೂ ಸಹ ಈ ದೇಶ ದುರಂತ. ಇದು ಈ ದೇಶದಲ್ಲಿ ಜಾತಿ ತಾರತಮ್ಯ ಇನ್ನೂ ಜೀವಂತವಾಗಿದೆ ಎಂಬುವುದಕ್ಕೆ ಜೀವಂತ ಸಾಕ್ಷಿ.

ಅದರಲ್ಲೂ ಓರ್ವ ಸಂವಿಧಾನದ ವಾರಸುದಾರ ಎಂದು ಪರಿಗಣಿಸಬಹುದಾದ ನ್ಯಾಯಾಧೀಶರಿಂದ ಇಂತಹ ನಡವಳಿಕೆ  ಆಘಾತ ತಂದಿದೆ ಎಂದು ಬೇಸರ ವ್ಯಕ್ತಪಡಿಸಿದರು.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!