ಹುತಾತ್ಮ ಪೊಲೀಸರ ವಿಮಾ ಮೊತ್ತ 20 ಲಕ್ಷದಿಂದ 50 ಲಕ್ಷಕ್ಕೆ ಏರಿಕೆ: ಸಿಎಂ ಸಿದ್ದರಾಮಯ್ಯ

Prasthutha|

ಬೆಂಗಳೂರು: ಕರ್ತವ್ಯದ ವೇಳೆ ಹುತಾತ್ಮರಾದ ಪೊಲೀಸ್ ಸಿಬ್ಬಂದಿಯ ಗುಂಪು ವಿಮೆ ಮೊತ್ತವನ್ನು 20 ಲಕ್ಷ ರೂಪಾಯಿಗಳಿಂದ 50 ಲಕ್ಷ ರೂಪಾಯಿಗಳಿಗೆ ಹೆಚ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಘೋಷಿಸಿದ್ದಾರೆ.

- Advertisement -

ಬೆಂಗಳೂರಿನ ಮೈಸೂರು ರಸ್ತೆಯ ಹುತಾತ್ಮರ ಉದ್ಯಾನವನದಲ್ಲಿ ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಬಳಿಕ ಪೊಲೀಸ್ ಸಂಸ್ಮರಣಾ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಈ ವಿಷಯ ಪ್ರಕಟಿಸಿದರು. ಪೊಲೀಸ್ ವ್ಯವಸ್ಥೆಯು ರಾಜ್ಯ ಮತ್ತು ಸರ್ಕಾರದ ಘನತೆ ಹೆಚ್ಚಿಸುವ ಕೆಲಸ ಮಾಡುತ್ತದೆ. ಅಭಿವೃದ್ಧಿ ಮತ್ತು ಕಾನೂನು ಸುವ್ಯವಸ್ಥೆ ನಡುವೆ ನೇರ ಸಂಬಂಧವಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸರಿಯಾಗಿದ್ದಾಗ ಹೆಚ್ಚಿನ ಬಂಡವಾಳ ಹೂಡಿಕೆಯಾಗುತ್ತದೆ ಎಂದು ಹೇಳಿದರು. ಇದು ಉದ್ಯೋಗ ಸೃಷ್ಟಿಯನ್ನು ಹೆಚ್ಚಿಸುತ್ತದೆ ಮತ್ತು ಅಭಿವೃದ್ಧಿಯನ್ನು ವೇಗಗೊಳಿಸುತ್ತದೆ. ಪರಿಣಾಮವಾಗಿ, ದೇಶದ ಜನರ ತಲಾ ಆದಾಯವೂ ಹೆಚ್ಚಾಗುತ್ತದೆ. ದೇಶದ ಕಾನೂನು ಸುವ್ಯವಸ್ಥೆಯನ್ನು ಪೊಲೀಸ್ ಇಲಾಖೆ ಕಟ್ಟುನಿಟ್ಟಾಗಿ ಕಾಪಾಡಬೇಕು ಎಂದು ಕರೆ ನೀಡಿದರು.

Join Whatsapp