ಬೆಳಗಾವಿ: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ವಿರೂಪಗೊಳಿಸಿರುವುದು ಖಂಡನೀಯ. ಎಂ ಇ ಎಸ್ ನವರು ಪುಂಡರು. ಅವರಿಗೆ ಕಾನೂನು ಇಲ್ಲ, ಏನೂ ಇಲ್ಲ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು. ಬೆಳಗಾವಿಯ ಅನಗೊಳದಲ್ಲಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಳಕ್ಕೆ ಸೋಮವಾರ ಸಿದ್ದರಾಮಯ್ಯ ಭೇಟಿ ನೀಡಿ ಗೌರವ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
ಪ್ರತಿಮೆ ವಿರೂಪಗೊಳಿಸಿರುವ ಘಟನೆಯಲ್ಲಿ ಸರ್ಕಾರದ ವೈಫಲ್ಯವಿದೆ. ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟು ಹೋಗಿದೆ. ಎಂಇಎಸ್ ನಿಷೇಧಿಸಬೇಕು ಎಂದು ಜನ ಒತ್ತಾಯಿಸುತ್ತಿದ್ದಾರೆ. ಈ ಎಲ್ಲಾ ವಿಚಾರಗಳ ಬಗ್ಗೆ ಸದನದಲ್ಲಿ ಚರ್ಚೆ ಮಾಡುತ್ತೇವೆ ಎಂದು ಹೇಳಿದರು.
ರಾಜ್ಯದಲ್ಲಿ ಗುಪ್ತಚರ ಇಲಾಖೆ ಎನ್ನುವುದು ಸತ್ತು ಹೋಗಿದೆ. ಆಡಳಿತದ ಮೇಲೆ ಈ ಸರ್ಕಾರಕ್ಕೆ ಹಿಡಿತ ಇಲ್ಲ. ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟು ಹೋಗಿದೆ ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.