ಅಂತರ್‌ ಧರ್ಮೀಯ ಜೋಡಿ ವಿವಾಹ : ರಕ್ಷಣೆ ನೀಡಲು ಅಲಹಾಬಾದ್‌ ಹೈಕೋರ್ಟ್‌ ನಿರ್ದೇಶನ

Prasthutha: June 12, 2021

ಅಲಹಾಬಾದ್‌ : ಅಂತರ್‌ ಧರ್ಮೀಯ ವಿವಾಹವಾದ ಜೋಡಿಯೊಂದಕ್ಕೆ ರಕ್ಷಣೆ ನೀಡುವಂತೆ ಅಲಹಾಬಾದ್‌ ಹೈಕೋರ್ಟ್‌ ಉತ್ತರ ಪ್ರದೇಶ ಪೊಲೀಸರಿಗೆ ನಿರ್ದೇಶಿಸಿದ್ದಾರೆ. ಜೋಡಿಯ ಜೀವನದಲ್ಲಿ ಅವರ ಕುಟುಂಬಸ್ಥರು ಹಸ್ತಕ್ಷೇಪ ಮಾಡುತ್ತಿದ್ದಾರೆಂಬ ಆರೋಪಗಳ ಹಿನ್ನೆಲೆಯಲ್ಲಿ ಕೋರ್ಟ್‌ ಈ ತೀರ್ಪು ನೀಡಿದೆ.

“ವಿವಾಹಿತ ಮಹಿಳೆ ಸ್ವಇಚ್ಛೆಯಿಂದ ಇಸ್ಲಾಂಗೆ ಮತಾಂತರಗೊಂಡಿರುವುದಾಗಿ ಹೇಳಿದ್ದಾರೆ. ಆಕೆಯನ್ನು ಬಲವಂತದಿಂದ ಮತಾಂತರಗೊಳಿಸಲಾಗಿದೆ ಎಂದು ಸ್ವತಃ ಆಕೆಯೇ ಆರೋಪಿಸದಿದ್ದರೆ, ಆಕೆಯ ಸ್ವಾತಂತ್ರ್ಯದಲ್ಲಿ ಯಾರೊಬ್ಬರೂ ಹಸ್ತಕ್ಷೇಪ ನಡೆಸಲು ಸಾಧ್ಯವಿಲ್ಲ ಎಂದು ಕೋರ್ಟ್‌ ತಿಳಿಸಿದೆ.

ಉತ್ತರ ಪ್ರದೇಶದ ಮೊರದಾಬಾದ್‌ ಜಿಲ್ಲೆಯ ನಿವಾಸಿಗಳಾದ ಇಪ್ಪತ್ತು ವಯಸ್ಸಿನ ಯಾಶಿದೇವಿ ಮತ್ತು ಗುಚ್ಚಾನ್‌ ಖಾನ್‌ ಮದುವೆಯಾಗಿದ್ದಾರೆ. ಯಾಶಿದೇವಿ ಇಸ್ಲಾಂಗೆ ಮತಾಂತರ ಆಗಿದ್ದಾರೆ. ವಿವಾಹದ ನಂತರ ತಮ್ಮ ವೈವಾಹಿಕ ಜೀವನ ಮತ್ತು ಸ್ವಾತಂತ್ರ್ಯಕ್ಕೆ ಕುಟುಂಬದವರು ಹಸ್ತಕ್ಷೇಪ ಮಾಡದಂತೆ, ಪ್ರತಿವಾದಿಗಳಿಗೆ ನಿರ್ದೇಶಿಸುವಂತೆ ಹೈಕೋರ್ಟ್‌ ಗೆ ದಂಪತಿ ವಿನಂತಿಸಿದ್ದರು.

ಅರ್ಜಿ ವಿಚಾರಣೆ ನಡೆಸಿದ ನ್ಯಾ. ಸಲೀಲ್‌ ಕುಮಾರ್‌ ರಾಯ್‌, ದಂಪತಿ ಪ್ರಾಪ್ತ ವಯಸ್ಕರಾಗಿದ್ದಾರೆ. ಅವರಿಗೆ ಯಾರ ಹಸ್ತಕ್ಷೇಪವಿಲ್ಲದೆ ಶಾಂತಿಯುತವಾಗಿ ಜೀವನ ನಡೆಸುವ ಹಕ್ಕು ಇದೆ ಎಂದು ಅಭಿಪ್ರಾಯ ಪಟ್ಟಿದ್ದಾರೆ.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ