ಅಂತರ್ ಜಾತಿ ಪ್ರೇಮಿಗಳಿಗೆ ಪೋಷಕರ ಬೆದರಿಕೆ | ಪ್ರಾಣರಕ್ಷಣೆಗಾಗಿ ಎಸ್ಪಿ ಭೇಟಿಯಾದ ಯುವಜೋಡಿ

Prasthutha: November 25, 2020

ಚಿತ್ರದುರ್ಗ : ಅಂತರ್ ಜಾತಿ ವಿವಾಹವಾದ ಜೋಡಿಗೆ ಜೀವ ಬೆದರಿಕೆಯಿರುವ ಬಗ್ಗೆ ವರದಿಯಾಗಿದೆ. ಚಿತ್ರದುರ್ಗದ ಗೌತಮಿ ಮತ್ತು ಅಮಿತ್ ಕಳೆದ ನಾಲ್ಕು ವರ್ಷಗಳಿಂದ ಪ್ರೀತಿಸುತ್ತಿದ್ದರು. ಆದರೆ, ಜಾತಿಯ ಕಾರಣ ನೀಡಿ ಇವರ ಮನೆಯವರು ಮದುವೆಗೆ ನಿರಾಕರಿಸಿದ್ದರು.

ಈ ಸಂಬಂಧ ಎರಡು ಬಾರಿ ಪೊಲೀಸ್ ಠಾಣೆ ಮೆಟ್ಟಿಲೂ ಏರಿಯಾಗಿತ್ತು. ಆದರೆ, ಕೊನೆಗೆ ಗೌತಮಿ ಮತ್ತು ಅಮಿತ್ ಚನ್ನಪಟ್ಟಣದ ಸಮೀಪದ ದೇವಸ್ಥಾನವೊಂದರಲ್ಲಿ ಮದುವೆಯಾಗಿದ್ದಾರೆ. ಅಮಿತ್ ಪರಿಶಿಷ್ಟ ಜಾತಿಗೆ ಸೇರಿದವನು ಎನ್ನುವುದು ಗೌತಮಿ ಮನೆಯವರ ಆಕ್ಷೇಪ. ಹೀಗಾಗಿ ಅಮಿತ್ ಮನೆಯವರೂ ಈ ವಿವಾಹಕ್ಕೆ ಒಪ್ಪಿಗೆ ನೀಡಿರಲಿಲ್ಲ.

ಹೀಗಾಗಿ ಮನೆಬಿಟ್ಟು ಹೋಗಿ ವಿವಾಹವಾದ ಜೋಡಿ, ಬೆಂಗಳೂರಿನಲ್ಲಿ ಕೆಲಸ ಮಾಡಿಕೊಂಡು ನವ ಜೀವನ ಆರಂಭಿಸುವ ಕನಸಿನಲ್ಲಿದ್ದರು. ಆದರೆ, ಮಗಳು ಕಾಣೆಯಾಗಿದ್ದಾಳೆ ಎಂದು ಗೌತಮಿ ಹೆತ್ತವರು ಮಗಳು ಕಾಣೆಯಾಗಿದ್ದಾಳೆ ಎಂದು ದೂರು ದಾಖಲಿಸಿದ್ದಾರೆ. ನೀವು ಎಲ್ಲೇ ಇದ್ದರೂ, ಬಿಡುವುದಿಲ್ಲ ಎಂದು ಜೀವ ಬೆದರಿಕೆಯನ್ನೂ ಒಡ್ಡಿದ್ದಾರೆ ಎನ್ನಲಾಗಿದೆ. ಪೊಲೀಸರೂ ಗೌತಮಿಯ ಹೆತ್ತವರಿಗೆ ಬೆಂಬಲಿಸಿದ್ದಾರೆ ಎಂದು ವರದಿಯಾಗಿದೆ.

ಇದರಿಂದ ಆತಂಕಕ್ಕೆ ಒಳಗಾಗಿರುವ ಯುವಜೋಡಿ ಚಿತ್ರದುರ್ಗ ಪೊಲೀಸ್ ವರಿಷ್ಠಾಧಿಕಾರಿ ಜಿ. ರಾಧಿಕಾ ಅವರನ್ನು ಭೇಟಿಯಾಗಿ ಪ್ರಾಣ ರಕ್ಷಣೆಗಾಗಿ ಮನವಿ ಮಾಡಿದ್ದಾರೆ. ಎಸ್ಪಿ ಜಿ. ರಾಧಿಕಾ ಅವರು ಜೋಡಿಗೆ ರಕ್ಷಣೆ ನೀಡುವ ಭರವಸೆ ನೀಡಿದ್ದಾರೆ.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ