ದೇಶದ್ರೋಹ ಪ್ರಕರಣ : ನಟಿ ಆಯಿಶಾ ಸುಲ್ತಾನಾಗೆ ಕೇರಳ ಹೈಕೋರ್ಟ್ ನಿಂದ ಮಧ್ಯಂತರ ನಿರೀಕ್ಷಣಾ ಜಾಮೀನು

Prasthutha|

ದೇಶದ್ರೋಹ ಪ್ರಕರಣಕ್ಕೆ ಸಂಬಂಧಿಸಿ ಲಕ್ಷದ್ವೀಪದ ಚಿತ್ರನಟಿ ಆಯಿಶಾ ಸುಲ್ತಾನಾ ಅವರಿಗೆ ಕೇರಳ ಹೈಕೋರ್ಟ್ ಗುರುವಾರ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡಿದೆ.

- Advertisement -


ನ್ಯಾಯಮೂರ್ತಿ ಅಶೋಕ್ ಮೆನನ್ ನೇತೃತ್ವದ ಏಕಸದಸ್ಯ ಪೀಠ ಈ ಆದೇಶ ನೀಡಿದೆ. ಪೊಲೀಸರು ನೀಡಿದ ನೋಟಿಸ್ ಪ್ರಕಾರ ನಟಿ ಜೂನ್ 20ರಂದು ವಿಚಾರಣೆಗೆ ಕವರತ್ತಿ ಪೊಲೀಸ್ ಠಾಣೆಗೆ ಹಾಜರಾಗಬೇಕು ಎಂದು ನ್ಯಾಯಾಧೀಶರು ನಿರ್ದೇಶನ ನೀಡಿದ್ದಾರೆ.


ಆದಾಗ್ಯೂ ನಟಿ ಸಲ್ಲಿಸಿದ್ದ ಜಾಮೀನು ಅರ್ಜಿಯ ಅಂತಿಮ ತೀರ್ಪನ್ನು ನ್ಯಾಯಾಧೀಶರು ಕಾಯ್ದಿರಿಸಿದ್ದಾರೆ.

Join Whatsapp