ಇಂದು ಕೇಂದ್ರ ಸರಕಾರದ ಮಧ್ಯಂತರ ಬಜೆಟ್‌ ಮಂಡನೆ

Prasthutha|

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಗುರುವಾರ ಬೆಳಿಗ್ಗೆ 11 ಗಂಟೆಗೆ 2024-25ನೇ ಹಣಕಾಸು ವರ್ಷದ ಕೇಂದ್ರದ ಮಧ್ಯಂತರ ಬಜೆಟ್‌ ಮಂಡಿಸಲಿದ್ದಾರೆ.

- Advertisement -

ಮಧ್ಯಂತರ ಬಜೆಟ್‌ನಲ್ಲಿ ಯಾವುದೇ ಹೊಸ ಘೋಷಣೆಗಳನ್ನು ಪ್ರಕಟಿಸುವುದಿಲ್ಲ ಎಂದು ಮೊದಲೇ ಸರಕಾರ ಹೇಳಿದ್ದು, ಹಳೆಯ ಹಾಗೂ ಹೊಸ ತೆರಿಗೆ ಪದ್ಧತಿಯಡಿ ತೆರಿಗೆದಾರರಿಗೆ ಯಾವುದೇ ವಿನಾಯಿತಿ ಪ್ರಕಟಿಸುವ ಸಾಧ್ಯತೆ ಇಲ್ಲ ಎಂದು ಹೇಳಲಾಗಿದೆ.

ಏಪ್ರಿಲ್‌ ಅಥವಾ ಮೇ ತಿಂಗಳಿನಲ್ಲಿ ಲೋಕಸಭೆಗೆ ಚುನಾವಣೆ ಘೋಷಣೆ ಸಾಧ್ಯತೆ ಇದೆ. ಕೇಂದ್ರದಲ್ಲಿ ಅಧಿಕಾರಕ್ಕೆ ಬರುವ ಹೊಸ ಸರ್ಕಾರ ಪೂರ್ಣ ಬಜೆಟ್‌ ಮಂಡಿಸಲಿದೆ ಎಂದು ಹೇಳಲಾಗಿದೆ.

- Advertisement -

ನಿರ್ಮಲಾ ಅವರು ಮಂಡಿಸುತ್ತಿರುವ ಆರನೇ ಬಜೆಟ್‌ ಇದಾಗಿದೆ. ಆರು ಬಾರಿ ಬಜೆಟ್‌ ಮಂಡಿಸಿರುವ ಮಾಜಿ ಪ್ರಧಾನಿ ದಿ. ಮೊರಾರ್ಜಿ ದೇಸಾಯಿ ಅವರ ದಾಖಲೆಯನ್ನು ಸಚಿವೆ ಸರಿಗಟ್ಟಲಿದ್ದಾರೆ.



Join Whatsapp