ನವದೆಹಲಿ: ಫೆಬ್ರುವರಿ 1 ರಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಧ್ಯಂತರ ಕೇಂದ್ರ ಬಜೆಟ್ ಮಂಡಿಸಲಿದ್ದಾರೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಹೇಳಿದ್ದಾರೆ.
17ನೇ ಲೋಕಸಭೆಯ ಕೊನೆಯ ಅವಧಿಯಾಗಿರುವ ಮಧ್ಯಂತರ ಬಜೆಟ್ ಅಧಿವೇಶನವು ಜನವರಿ 31 ರಿಂದ ಫೆಬ್ರುವರಿ 9 ರವರೆಗೆ ನಡೆಯಲಿದೆ. ಈ ಸಮಯದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಂಸತ್ತನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.