ಸಿಎಂ ಸಿದ್ದರಾಮಯ್ಯಗೆ ಮಧ್ಯಂತರ ರಿಲೀಫ್: ಸೆ.9ಕ್ಕೆ ಮತ್ತೆ ವಿಚಾರಣೆ ಮುಂದೂಡಿಕೆ

Prasthutha|

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ನೀಡಿರುವ ಅನುಮತಿ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್​ ಮತ್ತೆ ಮುಂದೂಡಿದೆ

- Advertisement -

ರಾಜ್ಯಪಾಲರ ಆದೇಶ ವಜಾಗೊಳಿಸಬೇಕು ಎಂದು ಸಿಎಂ ಸಲ್ಲಿಸಿದ್ದ ಅರ್ಜಿ ವಿಚಾರಣೆ 2ನೇ ಬಾರಿಗೆ ಮುಂದೂಡಿಕೆಯಾಗಿದೆ.

ಗಣೇಶ ಹಬ್ಬದ ಬಳಿಕ ಸೆಪ್ಟೆಂಬರ್‌ 9 ರಂದು ಮಧ್ಯಾಹ್ನ 2:30ಕ್ಕೆ ಹೈಕೋರ್ಟ್‌ ವಿಚಾರಣೆ ನಡೆಸಲಿದೆ.

- Advertisement -

ಇಂದು ದೂರುದಾರ ಮೈಸೂರಿನ ಸ್ನೇಹಮಯಿ ಕೃಷ್ಣ ಪರವಾಗಿ ಹಿರಿಯ ವಕೀಲ ಕೆ ಜಿ ರಾಘವನ್‌ ವಾದ ಮಂಡಿಸಿದ್ದಾರೆ. “ಸಣ್ಣ ಪ್ರಮಾಣದ ಅನುಮಾನಗಳಿದ್ದರೂ ತನಿಖೆಗೆ ಅನುಮತಿಸಬೇಕು. ಅದನ್ನು ಕಡೆಗಣಿಸಬಾರದು” ಎಂದು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಬಳಿ ಮನವಿ ಮಾಡಿದ್ದಾರೆ.

“1998-99ರವರೆಗೆ ಸಿದ್ದರಾಮಯ್ಯ ಅವರು ಉಪಮುಖ್ಯಮಂತ್ರಿಯಾಗಿದ್ದರು. 2004-05ರವರಗೆಗೆ ಮತ್ತೆ ಡಿಸಿಎಂ ಆಗಿದ್ದರು. 2013-18ರವರೆಗೆ ಸಿಎಂ ಆಗಿದ್ದರು. ಈಗ 2023ರಿಂದ ಸಿಎಂ ಆಗಿದ್ದಾರೆ. ಇಷ್ಟು ಸಮಯದವರೆಗೂ ಸಿಎಂ ಗಮನಕ್ಕೆ ಬಂದಿಲ್ಲವೇ” ಎಂದು ಕೆ ಜಿ ರಾಘವನ್‌ ಪ್ರಶ್ನಿಸಿದ್ದಾರೆ.

ವಿಚಾರಣೆಯನ್ನು ಸೆಪ್ಟೆಂಬರ್ 9ರ ಮಧ್ಯಾಹ್ನ 2:30 ಗಂಟೆಗೆ ಮುಂದೂಡಿಕೆ ಮಾಡಿರುವ ಪೀಠವು, ಸೆಪ್ಟೆಂಬರ್ 12ರ ಒಳಗಾಗಿ ಈ ಪ್ರಕರಣದ ಎಲ್ಲಾ ವಾದಗಳು ಮುಗಿಯಬೇಕು. ಇನ್ನಷ್ಟು ವಿಳಂಬ ಸರಿಯಲ್ಲ ಎಂದು ತಿಳಿಸಿದೆ.



Join Whatsapp