ಧಾರವಾಡ: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದಕ್ಕಾಗಿ ಚಕ್ರವರ್ತಿ ಸೂಲಿಬೆಲೆ ವಿರುದ್ದ ದಾಖಲಾಗಿದ್ದ FIRಗೆ ಧಾರವಾಡದ ಕೋರ್ಟ್ ಮಧ್ಯಾಂತರ ತಡೆಯಾಜ್ಞೆ ನೀಡಿದೆ.
ಅಕ್ಟೋಬರ್ 3 ರಂದು ದೇವಸ್ಥಾನಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಚಕ್ರವರ್ತಿ ಸೂಲಿಬೆಲೆ, ಸಿದ್ದರಾಮಯ್ಯರ ವಿರುದ್ಧ ಹಿಂದುಗಳನ್ನು ಎತ್ತಿಕಟ್ಟುವ ರೀತಿಯಲ್ಲಿ ಅವಹೇಳನಕರವಾಗಿ ಮಾತಾಡಿದ್ದರು.
ಕಾರವಾರ ಗ್ರಾಮಾಂತರ ಠಾಣೆಯ ಪೊಲೀಸರು ಅ. 5 ರಂದು ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಂಡಿದ್ದರು. ತಮ್ಮ ವಿರುದ್ಧ ದಾಖಲಾದ FIRನ್ನು ರದ್ದುಪಡಿಸುವಂತೆ ಸೂಲಿಬೆಲೆ ಅರ್ಜಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ನ್ಯಾ. ಶಿವಶಂಕರ ಅಮರಣ್ಣನವರ್ ಅವರಿದ್ದ ಏಕಸದಸ್ಯ ಪೀಠ ಪ್ರಕರಣದ ಕುರಿತು ಹೆಚ್ಚಿನ ವಿಚಾರಣೆ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟಿದೆ. ಮಾತ್ರವಲ್ಲ, FIRಗೆ ಮಧ್ಯಾಂತರ ತಡೆಯಾಜ್ಞೆ ನೀಡಿ ವಿಚಾರಣೆ ಮುಂದೂಡಿದೆ.