ಅಂತಾರಾಷ್ಟ್ರೀಯ ಕರೆಗಳನ್ನು ಸ್ಥಳೀಯ ಕರೆಗಳಾಗಿ ಪರಿವರ್ತನೆ: ಆರೋಪಿ ಸೆರೆ

Prasthutha|

ಬೆಂಗಳೂರು:  ಅಂತಾರಾಷ್ಟ್ರೀಯ ಕರೆಗಳನ್ನು ಸ್ಥಳೀಯ ಕರೆಗಳಾಗಿ ಮಾರ್ಪಾಡು ಮಾಡುತ್ತಿದ್ದ ಮನೆಯೊಂದರ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿದ್ದಾರೆ.

- Advertisement -

ಹೆಬ್ಬಗೋಡಿಯ ಮನೆಯೊಂದರಲ್ಲಿ ಕೇರಳ ಮೂಲದ ಮುಸ್ತಫಾ ಅಂತಾರಾಷ್ಟ್ರೀಯ ಕರೆಗಳನ್ನು ಸ್ಥಳೀಯ ಕರೆಗಳಾಗಿ ಪರಿವರ್ತನೆ ಮಾಡುತ್ತಿದ್ದ. ಖಚಿತವಾದ ಮಾಹಿತಿಯನ್ನು ಆಧರಿಸಿ ಪೊಲೀಸರು ದಾಳಿ ನಡೆಸಿದ್ದಾರೆ.

ಆರೋಪಿಯು ವಾಯ್ಸ್ ಓವರ್ ಇಂಟರ್ನೆಟ್ ಪ್ರೋಟೋಕಾಲ್ ನಿಂದ ಕರೆ ಬದಲಾಯಿಸಿ ಅಂತಾರಾಷ್ಟ್ರೀಯ ಕರೆಗಳನ್ನು ಸ್ಥಳೀಯ ಕರೆಗಳಾಗಿ  ಪರಿವರ್ತಿಸಿ ಸರ್ಕಾರದ ಬೊಕ್ಕಸಕ್ಕೆ ನಷ್ಟ ಮಾಡುತ್ತಿದ್ದ. ಹೆಬ್ಬಗೋಡಿಯ ಮನೆಯಿಂದ ಒಟ್ಟು 6 ಸಿಮ್ ಬಾಕ್ಸ್​ ಗಳನ್ನು ಸಿಸಿಬಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಒಂದು ಸಿಮ್ ಬಾಕ್ಸ್ ನಲ್ಲಿ ಏಕಕಾಲದಲ್ಲಿ 250 ಕ್ಕೂ ಹೆಚ್ಚು ಅಂತಾರಾಷ್ಟ್ರೀಯ ಕರೆಗಳನ್ನು ಲೋಕಲ್ ಕಾಲ್​ ಗಳಾಗಿ ಕನ್ವರ್ಟ್ ಮಾಡುತ್ತಿದ್ದದ್ದು ಬೆಳಕಿಗೆ ಬಂದಿದೆ.

- Advertisement -

Join Whatsapp