ನವದೆಹಲಿ: ಅಂತಾರಾಷ್ಟ್ರೀಯ ವಿಮಾನ ಕಾರ್ಯಾಚರಣೆಗಳು ವರ್ಷಾಂತ್ಯದ ವೇಳೆಗೆ ಸಹಜ ಸ್ಥಿತಿಗೆ ಮರಳುವ ಸಾಧ್ಯತೆಯಿದೆ ಎಂದು ಭಾರತೀಯ ವಿಮಾನಯಾನ ಸಚಿವಾಲಯದ ಕಾರ್ಯದರ್ಶಿ ರಾಜೀವ್ ಬನ್ಸಾಲ್ ಅವರು ಬುಧವಾರ ಮಾಧ್ಯಮಕ್ಕೆ ತಿಳಿಸಿದ್ದಾರೆ.
ದೇಶವು ಕೋವಿಡ್ ನಿರ್ಬಂಧದ ಹಿನ್ನೆಲೆಯಲ್ಲಿ ರದ್ದಾಗಿದ್ದ ಅಂತಾರಾಷ್ಟ್ರೀಯ ವಿಮಾನಗಳ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿತ್ತು.
ಕೋವಿಡ್ ಪ್ರಕರಣಗಳ ಸಂಖ್ಯೆ ಗಣನೀಯ ಪ್ರಮಾಣದ ಇಳಿಮುಖ ಮತ್ತು ವಾಕ್ಸಿನೇಷನ್ ಪ್ರಮಾಣದಲ್ಲಿ ಹೆಚ್ಚಳದ ಹಿನ್ನೆಲೆಯಲ್ಲಿ ವಿಮಾನಗಳ ಹಾರಾಟಗಳ ಮೇಲಿನ ನಿರ್ಬಂಧಗಳನ್ನು ಸಡಿಲಿಸತೊಡಗಿದೆ ಎಂದು ವಿಮಾನಯಾನ ಸಂಸ್ಥೆ ತಿಳಿಸಿದೆ.
ಕಳೆದ ವಾರ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರು ಅಂತಾರಾಷ್ಟ್ರೀಯ ವಿಮಾನಯಾನ ಕಾರ್ಯಗಳನ್ನು ಸಾಮಾನ್ಯಗೊಳಿಸುವ ಪ್ರಕ್ರಿಯೆಯನ್ನು ಸರ್ಕಾರ ಮೌಲ್ಯಮಾಪನ ಮಾಡುತ್ತಿದೆ ಎಂದು ತಿಳಿಸಿದರು.