ಮೂಡಬಿದಿರೆಯಲ್ಲಿ ಅಂತರಾಷ್ಟ್ರೀಯ ಮಟ್ಟದ ಸಾಂಸ್ಕೃತಿಕ ಜಾಂಬೂರಿ-2022 ಕಾರ್ಯಕ್ರಮ: ಮೋಹನ್ ಆಳ್ವ

Prasthutha|

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆ ಹಾಗೂ ಆಳ್ವಾಸ್ ಶಿಕ್ಷಣ ಸಂಸ್ಥೆಯ ವತಿಯಿಂದ ಡಿಸೆಂಬರ್ 21ರಿಂದ 27ರವರೆಗೆ ದಕ್ಷಿಣ ಕನ್ನಡ ಜಿಲ್ಲೆಯ ಆಳ್ವಾಸ್ ಶಿಕ್ಷಣ ಸಂಸ್ಥೆ ಮೂಡಬಿದಿರೆಯಲ್ಲಿ ಅಂತರಾಷ್ಟ್ರೀಯ ಮಟ್ಟದ ಮೊದಲನೇಯ ಸಾಂಸ್ಕೃತಿಕ ಜಾಂಬೂರಿ-2022 ಕಾರ್ಯಕ್ರಮ 7 ದಿನಗಳ ಕಾಲ ಬಹಳ ವಿಜೃಂಭಣೆಯಿಂದ ನಡೆಯಲಿದೆ ಎಂದು ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ.ಎಂ.ಮೋಹನ್ ಆಳ್ವಾ ತಿಳಿಸಿದ್ದಾರೆ.

- Advertisement -

ನಗರದ ಪ್ರೆಸ್ ಕ್ಲಬ್ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇತಿಹಾಸದಲ್ಲಿ ಮೊದಲ ಬಾರಿಗೆ ಈ ಕಾರ್ಯಕ್ರಮವು ಇಲ್ಲಿ ನಡೆಯುತ್ತಿದೆ. ಅಲ್ಲದೇ ವಿಶ್ವ ಜಾಂಬೂರಿಯು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಪ್ರಥಮ ಬಾರಿಗೆ ನಡೆಯುತ್ತಿದೆ. ಈ ಶಿಬಿರದಲ್ಲಿ ಭಾರತ ದೇಶ ಅಲ್ಲದೆ ಇತರ ದೇಶದಿಂದ ಒಟ್ಟು 50 ರಿಂದ 75 ಸಾವಿರದಷ್ಟು ಸೌಟ್ಸ್, ಗೈಡ್ಸ್ ರೋವರ್ಸ್, ರೇಂಜರ್ಸ್ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಭಾಗವಹಿಸಲಿದ್ದಾರೆ ಎಂದು ಹೇಳಿದ್ದಾರೆ.

ಶಿಬಿರದಲ್ಲಿ ಹಲವಾರು ಚಟುವಟಿಕೆಗಳು, ಕಾರ್ಯಕ್ರಮಗಳು, ತರಬೇತಿಗಳು ಮತ್ತು ನಾನಾ ರಾಜ್ಯ, ರಾಷ್ಟ್ರದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ. ರಾಜ್ಯ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದಿಂದ ಹಲವಾರು ಗಣ್ಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಪಿ.ಜಿ.ಆರ್.ಸಿಂಧ್ಯಾ, ಗಂಗಪ್ಪ ಗೌಡ, ಪ್ರಭಾಕರ್ ಭಟ್ ಉಪಸ್ಥಿತರಿದ್ದರು.



Join Whatsapp