ಬೆಂಗಳೂರು: “ಮಹಿಳಾ ಸುರಕ್ಷತೆ ಕೇವಲ ಘೋಷಣೆಯಲ್ಲ ಅದು ಘನತೆಯ ಹಕ್ಕು” ಎಂಬ ಧ್ಯೇಯವಾಕ್ಯದೊಂದಿಗೆ ನ್ಯಾಷನಲ್ ವಿಮೆನ್ಸ್ ಫ್ರಂಟ್ ಕರ್ನಾಟಕದ ವತಿಯಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಾರ್ಚ್ 8 ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು.
ಮಂಗಳೂರು, ಉಡುಪಿ, ರಾಯಚೂರು, ಗುಲ್ಬರ್ಗ, ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಭಾಗಗಳಲ್ಲಿ ಮಹಿಳೆಯರನ್ನು ಸೇರಿಸಿ ಭಿತ್ತಿಪತ್ರ ಪ್ರದರ್ಶನ, ಸಭಾ ಕಾರ್ಯಕ್ರಮ, ವೃದ್ಧಾಶ್ರಮ ಭೇಟಿ, ಆಟೋಟ, ಅಡುಗೆ ಸ್ಪರ್ಧೆ, ಸಾಧಕರಿಗೆ ಸನ್ಮಾನ, ಉಚಿತ ಆರೋಗ್ಯ ತಪಾಸಣಾ ಶಿಬಿರ, ಉಚಿತ ಹೊಲಿಗೆ ತರಬೇತಿ ಕೇಂದ್ರ ಉದ್ಘಾಟನೆ ಹೀಗೆ ಹತ್ತು ಹಲವು ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಮಹಿಳಾ ದಿನಾಚರಣೆಯನ್ನು ವಿಭಿನ್ನವಾಗಿ ಆಚರಿಸಲಾಯಿತು.