Home Uncategorized iPhone 16 ಬಿಡುಗಡೆ: ಮೊಬೈಲ್ ಖರೀದಿಗೆ ಮುಗಿಬಿದ್ದ ಜನ

iPhone 16 ಬಿಡುಗಡೆ: ಮೊಬೈಲ್ ಖರೀದಿಗೆ ಮುಗಿಬಿದ್ದ ಜನ

ಆಪಲ್ ಕಂಪನಿಯು ಇತ್ತೀಚೆಗೆ ತನ್ನ ಬಹು ನಿರೀಕ್ಷಿತ ಐಫೋನ್ 16 ಸರಣಿಯ ಫೋನ್ ಗಳನ್ನು ಬಿಡುಗಡೆ ಮಾಡಿದೆ. ಅಮೆರಿಕ ಕ್ಯಾಲಿಫೋರ್ನಿಯಾದಲ್ಲಿರುವ ಕೇಂದ್ರ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ 4 ಹೊಸ ಐಫೋನ್ ಗಳನ್ನು ವಿಶ್ವಕ್ಕೆ ಪರಿಚಯಿಸಿದೆ. ಈಗಾಗಲೇ, ಐಫೋನ್ ಪ್ರಿಯರನ್ನು ಆಕರ್ಷಿಸುವಲ್ಲಿ ಸೈ ಎನಿಸಿಕೊಂಡಿವೆ. ಅಂದಹಾಗೆ, ಈ ಫೋನ್ ಗಳ ಮಾರಾಟ ಇಂದಿನಿಂದ (ಸೆ.20) ಪ್ರಾರಂಭವಾಗಿದೆ. ಆಪಲ್ ಸ್ಟೋರ್ ಗಳ ಮುಂದೆ ಜನರು ಕ್ಯೂ ನಿಂತಿದ್ದಾರೆ.


ನವದೆಹಲಿಯ ಸಾಕೇತ್ ಮಾಲ್ ನಲ್ಲಿರುವ ಆ್ಯಪಲ್ ಸ್ಟೋರ್ ನಲ್ಲಿ ಮಾರಾಟ ನಡೆಯುತ್ತಿದೆ. ಸ್ಟೋರ್ ಹೊರಗೆ ಗ್ರಾಹಕರು ಸಾಲಿನಲ್ಲಿ ನಿಂತು ಫೋನ್ಗಳನ್ನು ಖರೀದಿ ಮಾಡುತ್ತಿದ್ದಾರೆ.


ದೆಹಲಿ, ಮುಂಬೈನ ಆ್ಯಪಲ್ ಸ್ಟೋರ್ ಗಳು ಹಾಗೂ ವಿವಿಧ ಮೊಬೈಲ್ ಮಳಿಗೆಗಳ ಮುಂದೆ ಗ್ರಾಹಕರ ಉದ್ದನೆಯ ಸಾಲುಗಳು ಕಂಡುಬಂದಿವೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.


ಇದೇ ಮೊದಲ ಬಾರಿಗೆ ಐಫೋನ್ ಗಳು ಭಾರತದಲ್ಲಿ ಸಿದ್ಧವಾಗುತ್ತಿದೆ. ಆದರೆ ಭಾರತದಲ್ಲಿ ತಯಾರಾದ ಫೋನ್ ಗಳು ಸದ್ಯಕ್ಕೆ ಮಾರಾಟವಾಗುತ್ತಿಲ್ಲ ಎಂದು ಮೂಲಗಳು ಹೇಳಿರುವುದಾಗಿ ವರದಿಯಾಗಿದೆ.
‘ಇದೇ ಮೊದಲ ಬಾರಿಗೆ ಹಿಂದಿನ ಆವೃತ್ತಿಯ ದುಬಾರಿ ಮಾದರಿಯ ಫೋನ್ ನ ಬೆಲೆಗಿಂತ ಅಗ್ಗದ ಬೆಲೆಗೆ 16 ಸರಣಿಯ ಐಫೋನ್ ಪ್ರೊ ಸರಣಿ ಮಾರಾಟವಾಗುತ್ತಿರುವುದು ವಿಶೇಷವಾಗಿದೆ. ಐಫೋನ್ 16 ಪ್ರೊ ಬೆಲೆ ₹1.19 ಲಕ್ಷ ಹಾಗೂ ಐಫೋನ್ 16 ಪ್ರೊ ಮ್ಯಾಕ್ಸ್ ಬೆಲೆ ₹1.44ಲಕ್ಷದಿಂದ ಲಭ್ಯ’ ಎಂದು ಕಂಪನಿ ಹೇಳಿದೆ.


ವರ್ಷದ ಹಿಂದೆ ಬಿಡುಗಡೆಯಾದ ಐಫೋನ್ 15 ಪ್ರೊ ಹಾಗೂ ಐಫೋನ್ 15 ಪ್ರೊ ಮ್ಯಾಕ್ಸ್ ಬೆಲೆಯು ಕ್ರಮವಾಗಿ ₹1.34 ಲಕ್ಷ ಹಾಗೂ ₹1.59 ಲಕ್ಷ ಇತ್ತು.
ಐಫೋನ್ 16 ಪ್ರೊ ಹಾಗೂ ಐಫೋನ್ 16 ಪ್ರೊ ಮ್ಯಾಕ್ಸ್ ಫೋನ್ ಗಳು 128ಜಿಬಿ, 256ಜಿಬಿ, 512ಜಿಬಿ ಹಾಗೂ 1 ಟಿಬಿ ಸೃತಿಕೋಶ ಸಾಮರ್ಥ್ಯದೊಂದಿಗೆ ಲಭ್ಯ. ಈವರೆಗಿನ ಐಫೋನ್ಗಳಲ್ಲೇ ಅತಿ ದೊಡ್ಡ ಡಿಸ್ ಪ್ಲೇ 6.3 ಇಂಚು ಹಾಗೂ 6.9 ಇಂಚಿನ ಪರದೆಯುಳ್ಳ ಫೋನ್ ಗಳು ಇವಾಗಿವೆ.

Join Whatsapp
Exit mobile version