IPL-2022: ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ನಾಯಕನಾಗಿ ಶ್ರೇಯಸ್ ಅಯ್ಯರ್ ನೇಮಕ

Prasthutha|

ಕೋಲ್ಕತ್ತಾ: IPL-2022ರ ಮೆಗಾ ಹರಾಜು ಪ್ರಕ್ರಿಯೆ ಪೂರ್ಣಗೊಂಡ ಬೆನ್ನಲ್ಲೇ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವು ತನ್ನ ನೂತನ ನಾಯಕನ ಆಯ್ಕೆಯನ್ನು ಘೋಷಿಸಿದೆ.
ಭಾರತ ಕ್ರಿಕೆಟ್ ತಂಡದ ಬ್ಯಾಟರ್ ಶ್ರೇಯಸ್ ಅಯ್ಯರ್ ಅವರನ್ನು ಕೋಲ್ಕತ್ತ ನೈಟ್ ರೈಡರ್ಸ್ ತಂಡದ ನಾಯಕರಾಗಿ ನೇಮಕ ಮಾಡಲಾಗಿದೆ. ಮೆಗಾ ಹರಾಜಿನಲ್ಲಿ ಶ್ರೇಯಸ್ ಅಯ್ಯರ್’ಗಾಗಿ ಆರ್’ಸಿಬಿ, ಡೆಲ್ಲಿ ಕ್ಯಾಪಿಟಲ್ಸ್, ಲಕ್ನೋ ಸೂಪರ್’ಜಯಂಟ್ಸ್, ಕೆಕೆಆರ್ ಹಾಗೂ ಗುಜರಾತ್ ಟೈಟನ್ಸ್ ಫ್ರಾಂಚೈಸಿ’ಗಳ ನಡುವೆ ಬಿರುಸಿನ‌ ಬಿಡ್ಡಿಂಗ್ ನಡೆದಿತ್ತು. ಆದರೆ ಅಂತಿಮವಾಗಿ 12.25 ಕೋಟಿ ರೂಪಾಯಿ ಮೊತ್ತಕ್ಕೆ ಅಯ್ಯರ್ ಕೋಲ್ಕತ್ತಾ ನೈಟ್ ರೈಡರ್ಸ್ ಪಾಲಾಗಿದ್ದರು.

- Advertisement -


ಕಳೆದ ಆವೃತ್ತಿಯಲ್ಲಿ ಕೆಕೆಆರ್ ತಂಡವನ್ನು ಫೈನಲ್’ವರೆಗೂ ಮುನ್ನಡೆಸಿದ್ದ ಇಂಗ್ಲೆಂಡ್’ನ‌ ಇಯಾನ್ ಮಾರ್ಗನ್ ಈ ಬಾರಿಯ ಮೆಗಾ ಹರಾಜಿನಲ್ಲಿ ಮಾರಾಟವಾಗದೆ ಉಳಿದಿದ್ದರು. ಮತ್ತೊಂದೆಡೆ ಶ್ರೇಯಸ್ ಅಯ್ಯರ್ ಐಪಿಎಲ್’ನಲ್ಲಿ ದೆಹಲಿ ತಂಡವನ್ನು ಮುನ್ನಡೆಸಿದ ಅನುಭವ ಹೊಂದಿದ್ದಾರೆ.
ಕೆಕೆಆರ್ ನಾಯಕನಾಗಿ ಆಯ್ಕೆಯಾದ ಕುರಿತು ಪ್ರತಿಕ್ರಿಯಿಸಿದ ಅಯ್ಯರ್, ಕೆಕೆಆರ್‌ನಂತಹ ಪ್ರತಿಷ್ಠಿತ ತಂಡವನ್ನು ಮುನ್ನಡೆಸುವ ಅವಕಾಶ ಸಿಕ್ಕಿರುವುದು ಅತ್ಯಂತ ಗೌರವದ ವಿಷಯ ಎಂದು ಭಾವಿಸುತ್ತೇನೆ. ಈ ಅವಕಾಶ ನೀಡಿದ ಕೆಕೆಆರ್ ಮಾಲೀಕರು, ಆಡಳಿತ ಮಂಡಳಿ ಮತ್ತು ಸಹಾಯಕ ಸಿಬ್ಬಂದಿಗೆ ಧನ್ಯವಾದ ಸಲ್ಲಿಸುತ್ತೇನೆ‌ ಎಂದಿದ್ದಾರೆ

Join Whatsapp