ಐಪಿಎಲ್ 16ನೇ ಆವೃತ್ತಿಯ ವೇಳಾಪಟ್ಟಿ ಪ್ರಕಟ

Prasthutha|

- Advertisement -

ಮುಂಬೈ: ಇಂಡಿಯನ್ ಪ್ರೀಮಿಯರ್ ಲೀಗ್- 2023 ವೇಳಾಪಟ್ಟಿಯನ್ನು ಬಿಸಿಸಿಐ ಪ್ರಕಟಿಸಿದ್ದು, ಐಪಿಎಲ್ 16ನೇ ಆವೃತ್ತಿ ಮಾರ್ಚ್ 31ರಂದು ಆರಂಭವಾಗಿ ಮೇ 21 ರಂದು ಕೊನೆಗೊಳ್ಳಲಿದೆ.

ಅಹಮದಾಬಾದ್ನಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ತಂಡ ನಾಲ್ಕು ಬಾರಿ ಚಾಂಪಿಯನ್ ಪಟ್ಟವನ್ನು ಅಲಂಕರಿಸಿದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಎದುರಿಸಲಿದೆ.

- Advertisement -


12 ಸ್ಥಳಗಳಲ್ಲಿ 52 ದಿನಗಳ ಈ ಟೂರ್ನಿಯಲ್ಲಿ 70 ಪಂದ್ಯಗಳು ನಡೆಯಲಿದೆ. ಪ್ಲೇ-ಆಫ್ ಮತ್ತು ಫೈನಲ್ ಪಂದ್ಯಗಳ ದಿನಾಂಕ ಮತ್ತು ಸ್ಥಳವನ್ನು ಇನ್ನಷ್ಟೇ ಪ್ರಕಟಿಸಬೇಕಾಗಿದೆ.
ಪಂದ್ಯಗಳು ಅಂತಾರಾಷ್ಟ್ರೀಯ ಕಾಲಮಾನ ರಾತ್ರಿ 7.30ಕ್ಕೆ ಆರಂಭವಾಗಲಿವೆ. ಎರಡು ಪಂದ್ಯಗಳಿರುವ ದಿನ ಮೊದಲ ಪಂದ್ಯ ಮಧ್ಯಾಹ್ನ 3.30ಕ್ಕೆ ನಡೆಯಲಿದೆ.

Join Whatsapp