ಐಪಿಎಲ್‍ ಅಂಪೈರ್ ಈಗ ಪಾಕಿಸ್ತಾನದಲ್ಲಿ ಚಪ್ಪಲಿ ವ್ಯಾಪಾರಿ

Prasthutha|

ಇಸ್ಲಾಮಾಬಾದ್: ಐಪಿಎಲ್ ಸೇರಿದಂತೆ  ನೂರಕ್ಕೂ ಹೆಚ್ಚು ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಅಂಪೈರ್ ಆಗಿದ್ದ ಅಸಾದ್ ರೌಫ್ ಇದೀಗ ಲಾಹೋರ್‌ನ ಲಾಂಡಾ ಬಜಾರ್‌ನಲ್ಲಿ ಚಪ್ಪಲಿ, ಬಟ್ಟೆ ಅಂಗಡಿ ಇಟ್ಟು ವ್ಯಾಪಾರ ಮಾಡುತ್ತಿರುವ ಬಗ್ಗೆ ಸ್ಥಳೀಯ ಮಾಧ್ಯಮ ವರದಿ ಮಾಡಿದೆ.

- Advertisement -

ಅಸಾದ್ ರೌಫ್ ಅಂತಾರಾಷ್ಟ್ರೀಯ ಪಂದ್ಯಗಳ ಅಂಪೈರ್ ಅಲ್ಲದೇ ಐಪಿಎಲ್ ನಲ್ಲೂ ಕೂಡ ಅಂಪೈರ್ ಆಗಿ ಕೆಲಸ ನಿರ್ವಹಿಸಿದ್ದರು.  ರೌಫ್ 2013ರ ಐಪಿಎಲ್ ನಲ್ಲಿ ಬುಕ್ಕಿಗಳೊಂದಿಗೆ ಸಂಪರ್ಕಿಸಿ ದುಬಾರಿ ಉಡುಗೊರೆ ಪಡೆದಿದ್ದರು ಎಂಬ ಆರೋಪ ಕೇಳಿಬಂದಿದ್ದು,  ಬಳಿಕ ವಿಚಾರಣೆ ನಡೆಸಿದ ಐಸಿಸಿಯ ಶಿಸ್ತು ಸಮಿತಿ ಆರೋಪ ಸಾಬೀತಾದ ಬಳಿಕ ರೌಫ್ ಅವರನ್ನು 2016ರ ನಂತರ ಐದು ವರ್ಷಗಳ ಕಾಲ ಅಂತಾರಾಷ್ಟ್ರೀಯ ಪಂದ್ಯಗಳ ಅಂಪೈರಿಂಗ್ ಗೆ ನಿಷೇಧ ಹೇರಿತ್ತು. ಈ ಮೂಲಕ ಅಸಾದ್ ರೌಫ್ ಅಂಪೈರ್ ವೃತ್ತಿ ಅಂತ್ಯ ಕಂಡಿದ್ದು ಇದೀಗ ಜೀವನೋಪಾಯಕ್ಕಾಗಿ ಚಪ್ಪಲಿ ,ಬಟ್ಟೆ ವ್ಯಾಪಾರ ಮಾಡುತ್ತಿದ್ದಾರೆ

- Advertisement -

Join Whatsapp