ಮಂಗಳೂರು ಡಿಸಿಪಿಯಾಗಿ ಐಪಿಎಸ್ ಅಧಿಕಾರಿ ಅಂಶು ಕುಮಾರ್

Prasthutha|

ಮಂಗಳೂರು: ಮಂಗಳೂರು ನಗರ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಹರಿರಾಂ ಶಂಕರ್ ಅವರ ವರ್ಗಾವಣೆಯಿಂದ ತೆರವಾದ ಸ್ಥಾನಕ್ಕೆ ಐಪಿಎಸ್ ಅಧಿಕಾರಿ ಅಂಶು ಕುಮಾರ್ ಅವರನ್ನು ವರ್ಗಾವಣೆ ಗೊಳಿಸಿ ಸರಕಾರ ಆದೇಶ ಹೊರಡಿಸಿದೆ.

- Advertisement -


ಅಂಶು ಕುಮಾರ್ ಅವರು ಪ್ರಸ್ತುತ ಉಡಪಿ ಕರಾವಳಿ ಭದ್ರತೆಯ ಎಸ್ ಪಿ ಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಇದೀಗ ಸರಕಾರ ಅವರನ್ನು ಮಂಗಳೂರು ನಗರ ಡಿಸಿಪಿಯಾಗಿ ವರ್ಗಾವಣೆಗೊಳಿಸಿದೆ. ಹರಿರಾಂ ಶಂಕರ್ ಅವರನ್ನು ಹಾಸನ ಪೊಲೀಸ್ ವರಿಷ್ಠಾಧಿಕಾರಿಯಾಗಿ ವರ್ಗಾವಣೆಗೊಳಿಸಲಾಗಿದೆ.



Join Whatsapp