Home ಟಾಪ್ ಸುದ್ದಿಗಳು ಅರವಿಂದ ಕೇಜ್ರಿವಾಲ್ ಸಮ್ಮುಖದಲ್ಲಿ ಆಪ್ ಸೇರಿದ ಭಾಸ್ಕರ್ ರಾವ್

ಅರವಿಂದ ಕೇಜ್ರಿವಾಲ್ ಸಮ್ಮುಖದಲ್ಲಿ ಆಪ್ ಸೇರಿದ ಭಾಸ್ಕರ್ ರಾವ್

ಬೆಂಗಳೂರು:  ಹಿರಿಯ ಐಪಿಎಸ್ ಅಧಿಕಾರಿ ಬಿ. ಭಾಸ್ಕರ್ ರಾವ್ ಅರವಿಂದ ಕೇಜ್ರಿವಾಲ್ ಸಮ್ಮುಖದಲ್ಲಿ ಆಮ್ ಆದ್ಮಿ ಪಕ್ಷ ಸೇರ್ಪಡೆಯಾಗಿದ್ದಾರೆ.

ನವದೆಹಲಿಯ ದೀನ್ ದಯಾಳ್ ಉಪಾಧ್ಯಾಯ ಮಾರ್ಗದಲ್ಲಿರುವ ಎಎಪಿ ಕಚೇರಿಯಲ್ಲಿ ಇಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಂದ ಸದಸ್ಯತ್ವ ಸ್ವೀಕರಿಸಿದ್ದಾರೆ.

ರೈಲ್ವೆ ಪೊಲೀಸ್ ಎಡಿಜಿಪಿ ಹುದ್ದೆಗೆ ಸ್ವಯಂ ನಿವೃತ್ತಿ ಕೋರಿ ಸೆಪ್ಟೆಂಬರ್ 2021ರಲ್ಲಿ ಭಾಸ್ಕರ್ ರಾವ್ ರಾಜೀನಾಮೆ ಸಲ್ಲಿಸಿದ್ದರು. ನಿರ್ಧಾರ ಪುನರ್ ಪರಿಶೀಲನೆಗೆ ಕೇಂದ್ರ ಗೃಹ ಸಚಿವಾಲಯ ಅವಕಾಶ ನೀಡಿತ್ತು. ಆದರೆ ಈ ನಿರ್ಧಾರದಿಂದ ಹಿಂದೆ ಸರಿಯದ ಹಿನ್ನೆಲೆಯಲ್ಲಿ ಸರ್ಕಾರ ರಾಜೀನಾಮೆ ಅಂಗೀಕರಿಸಿತ್ತು.

Join Whatsapp
Exit mobile version