Home ಟಾಪ್ ಸುದ್ದಿಗಳು ಸಿಬ್ಬಂದಿಗೆ ಕಿರುಕುಳ ಆರೋಪದ ಬೆನ್ನಲ್ಲೇ ಐಪಿಎಸ್ ಅಧಿಕಾರಿ ನಿಶಾ ಜೇಮ್ಸ್ ಎತ್ತಂಗಡಿ

ಸಿಬ್ಬಂದಿಗೆ ಕಿರುಕುಳ ಆರೋಪದ ಬೆನ್ನಲ್ಲೇ ಐಪಿಎಸ್ ಅಧಿಕಾರಿ ನಿಶಾ ಜೇಮ್ಸ್ ಎತ್ತಂಗಡಿ

ಬೆಂಗಳೂರು: ಸಿಬ್ಬಂದಿಗೆ ಮಾನಸಿಕ ಕಿರುಕುಳ ನೀಡಲಾಗುತ್ತಿದೆ ಎಂದು ಆರೋಪಿಸಿದ ಬೆನ್ನಲ್ಲೇ ನಗರ ವಿಭಾಗದ ಡಿಸಿಪಿ ನಿಶಾ ಜೇಮ್ಸ್ ಅವರನ್ನು ರಾಜ್ಯ ಆಂತರಿಕಾ ಭದ್ರತಾ ವಿಭಾಗದ ಎಸ್ಪಿಯಾಗಿ ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ.


ಸಿಬ್ಬಂದಿ ಕಳೆದ ಮೂರು ದಿನಗಳ ಹಿಂದೆ ನಿಶಾ ಜೇಮ್ಸ್ ವಿನಾಕಾರಣ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ 26 ಮಂದಿ ಸಿಬ್ಬಂದಿಗಳು ಹಿರಿಯ ಅಧಿಕಾರಿಗಳಿಗೆ ಪತ್ರ ಬರೆದಿದ್ದರು. ಈ ಬೆಳವಣಿಗೆ ಬೆನ್ನಲೇ ನಿಶಾ ಜೇಮ್ಸ್ ಅವರನ್ನು ಆಂತರಿಕ ಭದ್ರತಾ ವಿಭಾಗದ ಎಸ್ಪಿಯಾಗಿ ವರ್ಗಾವಣೆ ಮಾಡಲಾಗಿದೆ.


ನಿಶಾ ಜೇಮ್ಸ್ 2012ನೇ ಬ್ಯಾಚ್ IPS ಅಧಿಕಾರಿಯಾಗಿದ್ದರು. ಬೆಂಗಳೂರು ನಗರ ಪೊಲೀಸ್ ಆಡಳಿತ ವಿಭಾಗ ಡಿಸಿಪಿ ಯಾಗಿ ಬಿ.ಎಂ. ಲಕ್ಷ್ಮೀ ಪ್ರಸಾದ್ ಅವರನ್ನು ನಿಯೋಜನೆ ಮಾಡಲಾಗಿದೆ.

Join Whatsapp
Exit mobile version