ಐಪಿಎಸ್‌ ಅಧಿಕಾರಿ ರವಿ ಡಿ ಚನ್ನಣ್ಣನವರ್ ಮತ್ತೊಮ್ಮೆ ವರ್ಗಾವಣೆ

Prasthutha|

- Advertisement -

ಬೆಂಗಳೂರು: ಕಿಯೋನಿಕ್ಸ್ ವ್ಯವಸ್ಥಾಪಕ ನಿರ್ದೇಶಕ ಸ್ಥಾನದಿಂದ ಇತ್ತೀಚಿಗಷ್ಟೇ ರಾಜ್ಯ ಆಂತರಿಕ ಭದ್ರತಾ ವಿಭಾಗದ ಡಿಐಜಿ ಆಗಿ ವರ್ಗಾವಣೆಗೊಂಡಿದ್ದ ಐಪಿಎಸ್‌ ಅಧಿಕಾರಿ ರವಿ ಡಿ ಚನ್ನಣ್ಣನವರ್ ಅವರನ್ನು ಮತ್ತೊಮ್ಮೆ ವರ್ಗಾವಣೆಗೊಳಿಸಲಾಗಿದೆ.

ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಡಿಐಜಿ ಆಗಿ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಶನಿವಾರ ಆದೇಶ ಪ್ರಕಟಿಸಿದೆ.



Join Whatsapp
Exit mobile version