ಇಬ್ಬರು ಸಹೋದ್ಯೋಗಿಗಳನ್ನು ಗುಂಡಿಕ್ಕಿ ಹತ್ಯೆಗೈದ ಐಆರ್‌ಬಿ ಸಿಬ್ಬಂದಿ

Prasthutha|

ಪೋರ್‌ಬಂದರ್: ಇಂಡಿಯನ್ ರಿಸರ್ವ್ ಬೆಟಾಲಿಯನ್ (ಐಆರ್‌ಬಿ)ನ ಯೋಧನೊಬ್ಬ ತಮ್ಮ ಇಬ್ಬರು ಸಹೋದ್ಯೋಗಿಗಳನ್ನು ಗುಂಡಿಕ್ಕಿ ಹತ್ಯೆಗೈದ ಘಟನೆ ಗುಜರಾತ್‌ನ ಪೋರ್ ಬಂದರ್‌ನಲ್ಲಿ ನಡೆದಿದೆ.

- Advertisement -

ಗುಜರಾತ್‌ನಲ್ಲಿ ಡಿಸೆಂಬರ್‌ನಲ್ಲಿ ನಡೆಯಲಿರುವ ಮೊದಲ ಹಂತದ ಚುನಾವಣೆಗೆ ಸಂಬಂಧಿಸಿದಂತೆ, ಯೋಧರು ಭದ್ರತೆಗಾಗಿ ಕಾರ್ಯನಿರ್ವಹಿಸುತ್ತಿದ್ದರು. ಶನಿವಾರ ಸಂಜೆ ಕರ್ತವ್ಯದಲ್ಲಿದ್ದ ಯೋಧರ ನಡುವೆ ಮಾತುಕತೆ ನಡೆದಿದ್ದು, ನಂತರದಲ್ಲಿ ಅದು ಕಲಹಕ್ಕೆ ತಿರುಗಿದೆ.

ನಂತರ ಯೋಧ ತಮ್ಮ ಬಳಿಯಿದ್ದ ಬಂದೂಕಿನಿಂದ ಗುಂಡು ಹಾರಿಸಿದ್ದಾನೆ. ಗುಂಡು ತಾಗಿ ಇಬ್ಬರು ಯೋಧರು ಮೃತಪಟ್ಟರೆ, ಇಬ್ಬರು ಯೋಧರು ಗಂಭೀರ ಗಾಯಗೊಂಡಿದ್ದಾರೆ. ಗಾಯಗೊಂಡ ಯೋಧರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

- Advertisement -

ಗುಂಡು ಹಾರಿಸಿದ ಯೋಧ, ಮಣಿಪುರ ಘಟಕದ ಸಿಬ್ಬಂದಿ ಎಂದು ಪೊಲೀಸರು ತಿಳಿಸಿದ್ದಾರೆ.

Join Whatsapp