Home ಟಾಪ್ ಸುದ್ದಿಗಳು ಪಶ್ಚಿಮ ಬಂಗಾಳ: ಬಿರ್ಭೂಮ್ ಹಿಂಸಾಚಾರ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಿದ ಹೈಕೋರ್ಟ್

ಪಶ್ಚಿಮ ಬಂಗಾಳ: ಬಿರ್ಭೂಮ್ ಹಿಂಸಾಚಾರ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಿದ ಹೈಕೋರ್ಟ್

ಕೋಲ್ಕತಾ: ಪಶ್ಚಿಮ ಬಂಗಾಳದ ಬಿರ್ಭೂಮ್ ಜಿಲ್ಲೆಯ ಬೊಗ್ಪುಯಿ ನಡೆದ ಹಿಂಸಾಚಾರ ಪ್ರಕರಣದ ತನಿಖೆಯನ್ನು ಸಿಬಿಐ ವಹಿಸಿ ಕಲ್ಕತ್ತಾ ಹೈಕೋರ್ಟ್ ಆದೇಶ ನೀಡಿದೆ.

ಇತ್ತೀಚೆಗೆ ಬಿರ್ಭೂಮ್ ಎಂಬಲ್ಲಿ ನಡೆದ ಟಿಎಂಸಿ ಮುಖಂಡನ ಹತ್ಯೆಯ ಬಳಿಕ ಉಂಟಾದ ಘರ್ಷಣೆಯಲ್ಲಿ ಮಕ್ಕಳು, ಮಹಿಳೆಯರು ಸೇರಿದಂತೆ ಎಂಟು ಮಂದಿ ಸಜೀವ ದಹನವಾಗಿದ್ದರು ಎಂದು ಮಾಧ್ಯಮಗಳು ವರದಿ ಮಾಡಿವೆ.

ಗ್ರಾಮ ಉಪ ಪ್ರಧಾನ್ ಶೇಖ್ ಹತ್ಯೆ ಮತ್ತು ನಂತರದ ಘರ್ಷಣೆಗೆ ಸಂಬಂಧಿಸಿದಂತೆ ಎರಡು ಪ್ರಕರಣ ದಾಖಲಿಸಲಾಗಿದ್ದು, 11 ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೊರ್ಭೂಮ್ ಹಿಂಸಾಚಾರವನ್ನು ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡ ರಚಿಸಿ ತನಿಖೆ ನಡೆಸುತ್ತಿದ್ದ ವೇಳೆ ಸ್ವಯಂ ಪ್ರೇರಿತವಾಗಿ ಈ ಪ್ರಕರಣವನ್ನು ಕೈಗೆತ್ತಿಕೊಂಡ ಹೈಕೋರ್ಟ್, ಸಿಬಿಐಗೆ ವಹಿಸಿ ದಾಖಲೆ ಮತ್ತು ಬಂಧಿತರನ್ನು ಕೇಂದ್ರ ತನಿಖಾ ಸಂಸ್ಥೆಗೆ ಹಸ್ತಾಂತರಿಸುವಂತೆ ಆದೇಶಿಸಿದೆ.
ಮಾತ್ರವಲ್ಲ ಏಪ್ರಿಲ್ 7ರ ಒಳಗೆ ತನಿಖೆಯ ಪ್ರಗತಿ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸುವಂತೆ ಸಿಬಿಐಗೆ ಸೂಚಿಸಿದೆ.

Join Whatsapp
Exit mobile version