ಬೆಂಗಳೂರು: ರಾಜ್ಯದಲ್ಲಿ ಪಿಎಸ್ ಐ ನೇಮಕಾತಿಯಲ್ಲಿ ಅಕ್ರಮ ನಡೆದಿರುವುದರ ಬಗ್ಗೆ ವರದಿಯಾಗಿತ್ತು. ಒಟ್ಟು 545 ಪಿಎಸ್ಐ ಹುದ್ದೆ ನೇಮಕಾತಿಯಲ್ಲಿ ಅಕ್ರಮ ನಡೆದಿತ್ತು. ಇದೀಗ ಪ್ರಕರಣಕ್ಕೆ ಸಂಬಂಧಿಸಿ ಮರು ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಡಿಜಿ ಪ್ರವೀಣ್ ಸೂದ್ , ಪೊಲೀಸ್ ಆಯುಕ್ತ ಕಮಲ್ ಪಂತ್. ಸೇರಿದಂತೆ ಹಿರಿಯ ಅಧಿಕಾರಿಗಳ ಜೊತೆ ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ ಎನ್ನಲಾಗಿದೆ. ಸಭೆಯ ಬಳಿಕ ಮರು ಪರೀಕ್ಷೆಯ ಬಗ್ಗೆ ಘೋಷಣೆ ಸಾಧ್ಯತೆ ಇದೆ.
ಪ್ರಕರಣವನ್ನು ಸರಕಾರ ಸಿಐಡಿಗೆ ವಹಿಸಿತ್ತು. ಅದರಂತೆ ಅಕ್ರಮ ನೇಮಕಾತಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಪ್ರಕರಣದ ಕಿಂಗ್ ಪಿನ್, ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ಸೇರಿದಂತೆ ಹಲವರನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದರು.