ಸ್ವೆಟ್ಟರ್ ವಿತರಣೆಯಲ್ಲಿ ಅವ್ಯವಹಾರ: ತನಿಖೆಗೆ ಆದೇಶಿಸಿ ಸಿಎಂ ಬೊಮ್ಮಾಯಿ

Prasthutha|

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯ ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ 2020– 21ನೇ ಸಾಲಿನಲ್ಲಿ ಸ್ವೆಟ್ಟರ್ ವಿತರಣೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತನಿಖೆಗೆ ಆದೇಶಿಸಿದ್ದಾರೆ.

- Advertisement -

ದಲಿತ ಸಂಘರ್ಷ ಸಮಿತಿಯ ಅಧ್ಯಕ್ಷ ಡಾ. ಸಿ.ಎಸ್. ರಘು ಅವರು ಸ್ವಟ್ಟರ್ ವಿತರಣೆಯಲ್ಲಿ ಆಗಿರುವ ಅಕ್ರಮಗಳ ಕುರಿತು ಸಮಗ್ರ ಮಾಹಿತಿಯೊಂದಿಗೆ ಮುಖ್ಯಮಂತ್ರಿ ಅವರಿಗೆ ದೂರು ಸಲ್ಲಿಸಿದ್ದರು.

ಈ ದೂರಿನ ಅನ್ವಯ ಬಿಬಿಎಂಪಿಯ ಟಿ.ವಿ.ಸಿ.ಸಿಯಿಂದ ನಿಯಮಾನುಸಾರ ತನಿಖೆ ನಡೆಸಿ ತಮ್ಮ ಸ್ಪಷ್ಟ ಅಭಿಪ್ರಾಯದೊಂದಿಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚಿಸಿದ್ದಾರೆ.ವಿದ್ಯಾರ್ಥಿಗಳಿಗೆ ಸ್ವಟ್ಟರ್ ವಿತರಣೆಯಲ್ಲಿ ಅಕ್ರಮ ನಡೆದಿದ್ದು, ಸ್ವಟ್ಟರ್ ಖರೀದಿಸಲು ಕೆ.ಎಚ್.ಡಿ.ಸಿಗೆ ಬಿಬಿಎಂಪಿಯಿಂದ 1.72 ಕೋಟಿ ರೂ ಪಾವತಿಸಲಾಗಿದೆ. ಒಪ್ಪಂದದ ನಿಯಮಾವಳಿಗಳಂತೆ ಸ್ಪಟ್ಟರ್ ಗಳನ್ನು ವಿದ್ಯಾರ್ಥಿಗಳಿಗೆ ವಿತರಣೆ ಮಾಡಿಲ್ಲ. ಬಿಬಿಎಂಪಿ ಮತ್ತು ಕೆ.ಎಚ್.ಡಿ.ಸಿಯಿಂದ ಅಕ್ರಮ ನಡೆದಿರುವುದಾಗಿ ಬಂದಿರುವ ದೂರಿನಂತೆ ತನಿಖೆ ನಡೆಸಬೇಕು ಎಂದು ಮುಖ್ಯಮಂತ್ರಿ ಅವರು ಆದೇಶಿಸಿದ್ದಾರೆ.

- Advertisement -

ಈ ಕುರಿತು ಪ್ರತಿಕ್ರಿಯೆ ನೀಡಿರುವ ಡಾ. ಸಿ.ಎಸ್. ರಘು, ಸ್ವಟ್ಟರ್ ಹಗರಣ ಕುರಿತು ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಬೇಕು. ವಿಧಾನಮಂಡಲ ಅಧಿವೇಶನದಲ್ಲಿ ಪ್ರತಿಪಕ್ಷಗಳು ಈ ಕುರಿತು ಚರ್ಚೆ ನಡೆಸಿ ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳುವಂತೆ ಸರ್ಕಾರದ ಮೇಲೆ ಒತ್ತಡ ಹೇರಬೇಕು ಎಂದು ಮನವಿ ಮಾಡಿದ್ದಾರೆ.



Join Whatsapp