ದರ್ಶನ್ ಕಾಂಗ್ರೆಸ್ ಪರ ಕೆಲಸ ಮಾಡಿದರೆಂದು ಶಾಮಿಯಾನ ಹಾಕಿ ರಕ್ಷಣೆ ಮಾಡುತ್ತಿದ್ದಾರಾ?: ಶೋಭಾ ಕರಂದ್ಲಾಜೆ

Prasthutha|

ಬೆಂಗಳೂರು: ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ಮೇಲೆ ಯಾರಿಗೂ ರಕ್ಷಣೆ ಇಲ್ಲದಂತಾಗಿದೆ. ಸರ್ಕಾರ ಕೊಲೆಗಡುಕರ ಪರ ಇದೆ. ಕೊಲೆಗಡುಕರಿಗೆ ರಾಜ್ಯದಲ್ಲಿ ಭಯ ಇಲ್ಲ. ನಟ ದರ್ಶನ್ ಕಾಂಗ್ರೆಸ್ ಪರ ಚುನಾವಣೆಯಲ್ಲಿ ಕೆಲಸ ಮಾಡಿದರು ಎಂದು ಅವರನ್ನು ಶಾಮಿಯಾನ ಹಾಕಿ ರಕ್ಷಣೆ ಮಾಡುತ್ತಿದ್ದಾರಾ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪ್ರಶ್ನಿಸಿದರು.

- Advertisement -


ಕೇಂದ್ರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಬೆಂಗಳೂರಿಗೆ ಬಂದ ಸಂದರ್ಭದಲ್ಲಿ ಮಾತನಾಡಿದ ಅವರು, ದರ್ಶನ್ ಇರುವ ಠಾಣೆಗೆ ರಕ್ಷಣೆ ಕೊಡಲಾಗಿದೆ. ಜನರಿಗೊಂದು ಕಾನೂನು, ದೊಡ್ಡವರಿಗೊಂದು ಕಾನೂನು, ಕಾಂಗ್ರೆಸ್ ಕಾರ್ಯಕರ್ತರಿಗೊಂದು ಕಾನೂನು ಎಂಬ ಸಂದೇಶವನ್ನು ಸರ್ಕಾರ ರವಾನಿಸಿದೆ ಎಂದರು.
ಕಾನೂನು ರೀತಿಯಲ್ಲಿ ಸರ್ಕಾರ ಕ್ರಮ ವಹಿಸಲಿ. ಕೊಲೆಗಡುಕರ ರಕ್ಷಣೆಯನ್ನು ಸರ್ಕಾರ, ಪೊಲೀಸರು ಮಾಡಬಾರದು ಎಂದು ಶೋಭಾ ಹೇಳಿದರು.

Join Whatsapp
Exit mobile version