ಬೆಂಗಳೂರು: ತುಮಕೂರಿನಲ್ಲಿ ಏರ್ಪಡಿಸಿದ್ದ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಆಚರಣೆಯ ಸಂದರ್ಭದಲ್ಲಿ ಬೂಟು ಹಾಕಿಕೊಳ್ಳಲು ಗಾಂಧೀಜಿಯ ಫೋಟೋವನ್ನು ಆಸರೆಯಾಗಿರಿಸಿದ್ದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ನಡೆಯನ್ನು ಕಾಂಗ್ರೆಸ್ ಟೀಕಿಸಿದೆ.
ಗೃಹಸಚಿವರಿಗೆ ಬೂಟು ಹಾಕಿಕೊಳ್ಳಲು ಗಾಂಧಿ ಆಸರೆಯೇ? ಮಹಾತ್ಮ ಗಾಂಧಿಯವರಿಗೆ ಈ ರೀತಿಯಲ್ಲಿ ಅವಮಾನಿಸುವ ನಿರ್ದೇಶನ ನಾಗಪುರದಿಂದ ಬಂದಿತ್ತೇ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
ಕಾನೂನು ಸುವ್ಯವಸ್ಥೆ ನಿರ್ವಹಿಸುವುದನ್ನೂ ತಿಳಿಯದ, ಮಹನೀಯರಿಗೆ ಗೌರವಿಸುವುದನ್ನೂ ಅರಿಯದ ಸಚಿವರು ದೇಶಭಕ್ತಿಯ ಬಗ್ಗೆ ಭಾಷಣ ಬಿಗಿಯುವುದು ಹಾಸ್ಯಾಸ್ಪದ ಎಂದಿದೆ.