Home ಟಾಪ್ ಸುದ್ದಿಗಳು ಗಂಭೀರ ಘಟನೆ ಬಗ್ಗೆ ಪ್ರಧಾನಿ, ಗೃಹಸಚಿವರು ಲೋಕಸಭೆಯಲ್ಲಿ ಉತ್ತರ ನೀಡಬೇಕೆಂದು ಬಯಸೋದು ತಪ್ಪಾ?: ಡಿಕೆ ಸುರೇಶ್

ಗಂಭೀರ ಘಟನೆ ಬಗ್ಗೆ ಪ್ರಧಾನಿ, ಗೃಹಸಚಿವರು ಲೋಕಸಭೆಯಲ್ಲಿ ಉತ್ತರ ನೀಡಬೇಕೆಂದು ಬಯಸೋದು ತಪ್ಪಾ?: ಡಿಕೆ ಸುರೇಶ್

ನವದೆಹಲಿ: ಸಂಸತ್ ಭದ್ರತಾ ಲೋಪ ವಿಚಾರವಾಗಿ ಸಂಸತ್ತಿನಲ್ಲಿ ಚರ್ಚೆಗೆ ಆಗ್ರಹಿಸಿ ಪ್ರತಿಭಟನೆ ಮಾಡಿದ ಹಿನ್ನೆಲೆಯಲ್ಲಿ ಅಮಾನತು ಆದ 146 ಸಂಸದರಲ್ಲಿ ಡಿಕೆ ಸುರೇಶ್ ಕೂಡ ಒಬ್ಬರು. ಸಂಸತ್ತಿನಿಂದ ಅಮಾನತುಗೊಂಡ ಬಳಿಕ ದೆಹಲಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಸಂಸತ್ತಿನ ಭದ್ರತಾ ವೈಫಲ್ಯದಂತಹ ಗಂಭೀರ ಘಟನೆ ಬಗ್ಗೆ ಪ್ರಧಾನಿ, ಗೃಹಸಚಿವರು ಲೋಕಸಭೆಯಲ್ಲಿ ಉತ್ತರ ನೀಡಬೇಕೆಂದು ಬಯಸೋದು ತಪ್ಪಾ ಎಂದು ಪ್ರಶ್ನಿಸಿದ್ದಾರೆ.

ಪ್ರಜಾಪ್ರಭುತ್ವ ದೇವಾಲಯಕ್ಕೆ ರಕ್ಷಣೆ ಇಲ್ಲ. ಇನ್ನು ಬೇರೆಯವರಿಗೆ ರಕ್ಷಣೆ ನೀಡಲಾಗುತ್ತದೆಯೇ ಎಂದು ಧ್ವನಿ ಎತ್ತಿದ ಕಾರಣ ನನ್ನನ್ನೂ ಸೇರಿದಂತೆ ವಿರೋಧ ಪಕ್ಷಗಳ ಒಟ್ಟು 146 ಸಂಸತ್ ಸದಸ್ಯರನ್ನು ಅಮಾನತು ಮಾಡಲಾಗಿದೆ. ಈ ಮೂಲಕ ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರ ವಿರೋಧ ಪಕ್ಷವನ್ನು ಹತ್ತಿಕ್ಕಲು ಮುಂದಾಗಿದೆ. ಸರ್ವಾಧಿಕಾರಿ ಮನಸ್ಥಿತಿಯ ಕೇಂದ್ರ ಸರ್ಕಾರವು ವಿರೋಧ ಪಕ್ಷಗಳ ಧ್ವನಿಯನ್ನು ಹತ್ತಿಕ್ಕುವ ಮೂಲಕ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಿದೆ ಎಂದು ಕಿಡಿಗಾರಿದ್ದಾರೆ.

ಪ್ರಜಾಪ್ರಭುತ್ವದ ದೇವಸ್ಥಾನದ ಒಳಗೆ ಅಕ್ರಮ ಪ್ರವೇಶದ ಮೂಲಕ ದಾಳಿ ಮಾಡಲಾಗಿದ್ದು, ಈ ಭದ್ರತಾ ವೈಫಲ್ಯ ಕುರಿತು ಪ್ರಧಾನಮಂತ್ರಿ ಹಾಗೂ ಕೇಂದ್ರ ಗೃಹಸಚಿವರು ಲೋಕಸಭೆಯಲ್ಲಿ ಉತ್ತರ ನೀಡಬೇಕು ಎಂದು ನಾವು ಆಗ್ರಹಿಸಿದೆವು. ಈ ಪ್ರಕರಣದ ತನಿಖೆಯಲ್ಲಿ ಪಾಸ್ ವಿತರಣೆ ಮಾಡಿದ ಸಂಸದರೂ ಸೇರಿದಂತೆ ಎಲ್ಲರನ್ನು ತನಿಖೆಗೆ ಒಳಪಡಿಸಬೇಕು ಎಂದು ವಿರೋಧ ಪಕ್ಷಗಳು ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ಆಗ್ರಹ ಮಾಡಿದೆವು ಎಂದು ಡಿಕೆ ಸುರೇಶ್ ಹೇಳಿದ್ದಾರೆ.

Join Whatsapp
Exit mobile version