Home ಕರಾವಳಿ ಹಿಜಾಬ್ ವಿಚಾರದಲ್ಲಿ ಶಿಕ್ಷಣ ಇಲಾಖೆ ರಾಜ್ಯದ ಜನರನ್ನು ತಪ್ಪು ದಾರಿಗೆಳೆಯುತ್ತಿದೆಯೇ?

ಹಿಜಾಬ್ ವಿಚಾರದಲ್ಲಿ ಶಿಕ್ಷಣ ಇಲಾಖೆ ರಾಜ್ಯದ ಜನರನ್ನು ತಪ್ಪು ದಾರಿಗೆಳೆಯುತ್ತಿದೆಯೇ?

ಉಡುಪಿ ವಿಚಾರಕ್ಕೆ ಸಂಬಂಧಿಸಿ ಸುಳ್ಳು ಮಾಹಿತಿ ನೀಡಿಕೆ !

ಉಡುಪಿ: ಉಡುಪಿ ಸರ್ಕಾರಿ ಕಾಲೇಜಿನ ಹಿಜಾಬ್ ವಿಚಾರಕ್ಕೆ ಸಂಬಂಧಿಸಿದಂತೆ ಶಿಕ್ಷಣ ಇಲಾಖೆ ರಾಜ್ಯದ ಜನರನ್ನು ತಪ್ಪು ದಾರಿಗೆಳೆಯುತ್ತಿದೆಯೇ? ಎಂಬ ಸಂಶಯ ಇತ್ತೀಚೆಗೆ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅವರ ಪತ್ರದಿಂದ ಮೂಡಿದೆ.

ಕರ್ನಾಟಕ ಸರ್ಕಾರದ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅವರು ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರನ್ನು ಉಲ್ಲೇಖಿಸುತ್ತಾ ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರಿಗೆ 25.01,2022 ರಂದು ಬರೆದ ಪತ್ರದಲ್ಲಿ, ಉಡುಪಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಿಗದಿತ ಸಮವಸ್ತ್ರವನ್ನು ಕಡ್ಡಾಯಗೊಳಿಸದಿದ್ದರೂ ಕೆಲವು ವಿದ್ಯಾರ್ಥಿಗಳು ತಮ್ಮ ಆಯ್ಕೆಯ ವಸ್ತ್ರವನ್ನು ಧರಿಸಲು ಅವಕಾಶ ನೀಡಬೇಕೆಂಬ ಒತ್ತಾಯಿಸಿ ತಗಾದೆ ತೆಗೆಯುತ್ತಿದ್ದು, ಕಾಲೇಜಿನ ವಸ್ತ್ರ ಸಂಹಿತೆಯ ಕುರಿತು ಮಾಹಿತಿ ಇದೆ. ವಿವಾದ ಸೃಷ್ಟಿಸಲೆಂದೇ ಕೆಲವು ವಿದ್ಯಾರ್ಥಿಗಳು ಗೊಂದಲಮಯ ವಾತಾವರಣ ನಿರ್ಮಿಸುತ್ತಿರುವುದು ಸರಿಯಲ್ಲ ಎಂದು ಉಲ್ಲೇಖಿಸಿದ್ದಾರೆ.

ಆದರೆ ವಾಸ್ತವದಲ್ಲಿ ಉಡುಪಿಯ ವಿದ್ಯಾರ್ಥಿಗಳ ಪೈಕಿ ಯಾರೂ ತಮ್ಮ ಆಯ್ಕೆಯ ವಸ್ತ್ರವನ್ನು ಧರಿಸಲು ಅವಕಾಶ ನೀಡಬೇಕೆಂದು ಒತ್ತಾಯಿಸಿಲ್ಲ, ಬದಲಾಗಿ ಸಂತ್ರಸ್ತ ವಿದ್ಯಾರ್ಥಿಗಳು ಸಮವಸ್ತ್ರದ ಶಾಲನ್ನಾದರೂ ಶಿರವಸ್ತ್ರವಾಗಿ ಸಂವಿಧಾನಬದ್ಧ ಧರಿಸಲು ಅವಕಾಶ ನೀಡಬೇಕೆಂದು ಮನವಿ ಮಾಡಿದ್ದರು. ಶಿರವಸ್ತ್ರ ನಮ್ಮ ಸಂವಿಧಾನಬದ್ಧ ಹಕ್ಕು ಎಂದು ವಿದ್ಯಾರ್ಥಿಗಳು ಪ್ರತಿಪಾದಿಸಿದ್ದಾರೆ.

ಶಿಕ್ಷಣ ಇಲಾಖೆಯ ಪತ್ರವನ್ನು ಅವಲೋಕಿಸುವುದಾದರೆ ಹಿಜಾಬ್ ವಿಚಾರದಲ್ಲಿ ಶಿಕ್ಷಣ ಇಲಾಖೆ ಜನರನ್ನು ದಾರಿ ತಪ್ಪಿಸುತ್ತಿರುವುದು ಬಯಲಾಗಿದೆ. ಈ ಮೂಲಕ ರಾಜ್ಯದ ಜನರಿಗೆ ಸುಳ್ಳು ಮಾಹಿತಿ ನೀಡುತ್ತಿರುವುದು ಬಟಾಬಯಲಾಗಿದೆ.

Join Whatsapp
Exit mobile version