ದಮ್ಮಾಮ್: ಐ.ಎಸ್.ಎಫ್ ವತಿಯಿಂದ ಕನ್ನಡ ರಾಜ್ಯೋತ್ಸವದ ಅಂಗವಾಗಿ ನ.1ರಂದು ‘ಅನಿವಾಸಿ ಕನ್ನಡಿಗರ ಸಮ್ಮಿಲನ – 2020

►► ಭಾಷಣ ಸ್ಪರ್ಧೆ, ಪ್ರಬಂಧ ಸ್ಪರ್ಧೆ, ಕನ್ನಡಿಗ ಸಾಧಕರಿಗೆ ಸನ್ಮಾನ

ದಮ್ಮಾಮ್: 65ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ  ಇಂಡಿಯನ್ ಸೋಶಿಯಲ್ ಫೋರಂ, ದಮ್ಮಾಮ್, ಕರ್ನಾಟಕ ರಾಜ್ಯ ಘಟಕದ ವತಿಯಿಂದ ನವೆಂಬರ್ 1ರಂದು ‘ಅನಿವಾಸಿ ಕನ್ನಡಿಗರ ಸಮ್ಮಿಲನ-2020’ ಕಾರ್ಯಕ್ರಮವನ್ನು ದಮ್ಮಾಮ್ ನಲ್ಲಿ ಆಯೋಜಿಸಲಾಗಿದೆ. ಸಮಾರಂಭವು ಆನ್ ಲೈನ್ ಮೂಲಕ ನಡೆಯಲಿದ್ದು, ಗಣ್ಯ ವ್ಯಕ್ತಿಗಳು ಪಾಲ್ಗೊಳ್ಳಲಿದ್ದಾರೆ ಎಂದು ಆಯೋಜಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

- Advertisement -

ಕಾರ್ಯಕ್ರಮದ ನೇರ ಪ್ರಸಾರ ಮಾಡಲಾಗುತ್ತದೆ ಮತ್ತು ವಿವಿಧ ಕ್ಷೇತ್ರಗಳ ಕನ್ನಡಿಗ ಸಾಧಕರಿಗೆ ಸನ್ಮಾನಿಸಲಾಗುತ್ತದೆ.

ಕಾರ್ಯಕ್ರಮದ ಪ್ರಯುಕ್ತ “ದೇಶದ ಅಭಿವೃದ್ಧಿಯಲ್ಲಿ ಕನ್ನಡಿಗರ ಕೊಡುಗೆ” ಎಂಬ ವಿಷಯದ ಮೇಲೆ ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಲಾಗಿದ್ದು, ಪ್ರಬಂಧವನ್ನು ಕಳುಹಿಸಲು ಕೊನೆಯ ದಿನಾಂಕ 28/10/2020 ಆಗಿದೆ. ಸ್ಪರ್ಧೆಯಲ್ಲಿ ಇಬ್ಬರನ್ನು ವಿಜೇತರನ್ನಾಗಿ ಆಯ್ಕೆಮಾಡಲಾಗುವುದು. ಮಕ್ಕಳಿಗಾಗಿ “ನನ್ನ ಪ್ರೀತಿಯ ಕರುನಾಡು” ಎಂಬ ವಿಷಯದ ಮೇಲೆ ಭಾಷಣ ಮತ್ತು ಬರಹ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.

ಕಳೆದ ಮೂರು ವರ್ಷಗಳಿಂದ ಇಂಡಿಯನ್ ಸೋಶಿಯಲ್ ಫೋರಂ, ದಮ್ಮಾಮ್ ವತಿಯಿಂದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಆಯೋಜಿಸುತ್ತಿದೆ.. ಅನಿವಾಸಿಗಳಲ್ಲಿ ಕನ್ನಡ ನಾಡು ನುಡಿಯ ಕುರಿತು ಅರಿವು ಮತ್ತು  ಅಭಿಮಾನವನ್ನು ಮೂಡಿಸುವುದು ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿದೆ ಎಂದು ಪ್ರಕಟನೆ ತಿಳಿಸಿದೆ.