ಎಂಪಿ‌ ಕುಮಾರ ಸ್ವಾಮಿ, ಸುಕುಮಾರ ಶೆಟ್ಟಿ ಕಾಂಗ್ರೆಸ್‌ ಸೇರ್ಪಡೆ

Prasthutha|

ಬೆಂಗಳೂರು: ಬಿಹೆಪಿಯ ಇಬ್ಬರು ಮಾಜಿ ಶಾಸಕರು ಕಾಂಗ್ರೆಸ್ ಪಕ್ಷ ಸೇರಿದ್ದಾರೆ. ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕಾಂಗ್ರೆಸ್ ಕಛೇರಿಯಲ್ಲಿ ನಡೆದ ಸಮಾರಂಭದಲ್ಲಿ ಮೂಡಿಗೆರೆ ಕ್ಷೇತ್ರದ ಮಾಜಿ ಶಾಸಕ ಎಂ. ಪಿ. ಕುಮಾರಸ್ವಾಮಿ, ಬೈಂದೂರು ಕ್ಷೇತ್ರದ ಮಾಜಿ ಶಾಸಕ ಬಿ. ಎಂ. ಸುಕುಮಾರ್‌ ಶೆಟ್ಟಿ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಸಮ್ಮುಖದಲ್ಲಿ ಕಾಂಗ್ರೆಸ್ ಸೇರಿದರು.

- Advertisement -

2023ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಕರಾವಳಿಯ ಪ್ರಭಾವಿ ನಾಯಕ, ಬೈಂದೂರು ಕ್ಷೇತ್ರದ ಹಾಲಿ ಬಿಜೆಪಿ ಶಾಸಕ ಬಿ. ಎಂ. ಸುಕುಮಾರ್ ಶೆಟ್ಟಿಗೆ ಟಿಕೆಟ್ ನೀಡಿರಲಿಲ್ಲ. ಲೋಕ ಸಭಾ ಚುನಾವಣೆಯ ಹೊಸ್ತಿಲಲ್ಲಿ ಅವರು ಕಾಂಗ್ರೆಸ್ ಸೇರಿದ್ದಾರೆ.

ಎಂ. ಪಿ. ಕುಮಾರಸ್ವಾಮಿಗೆ 2023ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕೈ ತಪ್ಪಿತ್ತು. ಜೆಡಿಎಸ್‌ನಿಂದ ಮೂಡಿಗೆರೆಯಲ್ಲಿ ಕಣಕ್ಕಿಳಿದ ಅವರು ಸೋತಿದ್ದರು. 2018ರ ಚುನಾವಣೆಯಲ್ಲಿ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ಮೀಸಲು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಎಂ. ಪಿ. ಕುಮಾರಸ್ವಾಮಿ 58,783 ಮತಗಳನ್ನು ಪಡೆದು ಕಾಂಗ್ರೆಸ್‌ನ ಮೋಟಮ್ಮರನ್ನು (46,271 ಮತ) ಸೋಲಿಸಿದ್ದರು.ಆದರೆ 2023ರ ಚುನಾವಣೆಯಲ್ಲಿ ಹಾಲಿ ಶಾಸಕರಾದರೂ ಬಿಜೆಪಿ ಎಂ. ಪಿ. ಕುಮಾರಸ್ವಾಮಿಗೆ ಟಿಕೆಟ್ ನೀಡಲಿಲ್ಲ. ಜೆಡಿಎಸ್‌ ಸೇರಿ ಅವರು 26038 ಮತಗಳನ್ನು ಪಡೆದು ಸೋಲುಂಡರು. ಬಿಜೆಪಿ ಅಭ್ಯರ್ಥಿ ದೀಪಕ್ ದೊಡ್ಡಯ್ಯ ಕೂಡ 50121 ಮತಗಳನ್ನು ಪಡೆದು ಸೋತು ಕಾಂಗ್ರೆಸ್‌ನ ನಯನ ಮೋಟಮ್ಮ 50843 ಮತಗಳನ್ನು ಪಡೆದು ವಿಜಯಿಯಾದರು. ಅದೇ ಎಂ. ಪಿ. ಕುಮಾರಸ್ವಾಮಿ ಕಾಂಗ್ರೆಸ್ ಸೇರಿದ್ದಾರೆ.



Join Whatsapp