Home ಟಾಪ್ ಸುದ್ದಿಗಳು ಇಸ್ಮಾಯಿಲ್ ಹನಿಯೆಹ್ ಹತ್ಯೆಗೆ ಪ್ರತ್ಯುತ್ತರ ನೀಡದೆ ಬಿಡುವುದಿಲ್ಲ: ಹಮಾಸ್ ಸಂದೇಶ

ಇಸ್ಮಾಯಿಲ್ ಹನಿಯೆಹ್ ಹತ್ಯೆಗೆ ಪ್ರತ್ಯುತ್ತರ ನೀಡದೆ ಬಿಡುವುದಿಲ್ಲ: ಹಮಾಸ್ ಸಂದೇಶ

ಗಾಝಾ: ಹಮಾಸ್ ನಾಯಕ ಇಸ್ಮಾಯಿಲ್ ಹನಿಯೆಹ್ ಹತ್ಯೆಗೆ ಪ್ರತ್ಯುತ್ತರ ನೀಡದೆ ಬಿಡುವುದಿಲ್ಲ ಎಂದು ಹಮಾಸ್ ರಾಜಕೀಯ ದಳದ ಸದಸ್ಯ ಮೂಸಾ ಅಬು ಮರ್ಝುಕ್ ಹೇಳಿದ್ದಾರೆ.


ಈ ಕುರಿತು ಪ್ರಕಟಣೆ ಬಿಡುಗಡೆ ಮಾಡಿರುವ ಅವರು, “ಇಸ್ಮಾಯಿಲ್ ಹನಿಯೆಹ್ ಅವರ ಹತ್ಯೆ ಹೇಡಿತನದ್ದಾಗಿದ್ದು, ಅದಕ್ಕೆ ಪ್ರತ್ಯುತ್ತರ ನೀಡದೆ ಬಿಡುವುದಿಲ್ಲ” ಎಂದು ಎಚ್ಚರಿಸಿದ್ದಾರೆ.


ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಹಮಾಸ್ ರಾಜಕೀಯ ನಾಯಕ ಇಸ್ಮಾಯಿಲ್ ಹನಿಯೆಹ್ ಹತ್ಯೆಯಾಗಿದ್ದಾರೆ ಎಂದು ಬುಧವಾರ ಹಮಾಸ್ ಪ್ರಕಟಿಸಿದೆ.


ಅಕ್ಟೋಬರ್ 7ರ ದಾಳಿಯ ನಂತರ ಇಸ್ಮಾಯಿಲ್ ಹನಿಯೆಹ್ ಅವರನ್ನು ಕೊಂದು ಹಮಾಸ್ ಗುಂಪನ್ನು ನಾಶಮಾಡುವುದಾಗಿ ಇಸ್ರೇಲ್ ಪ್ರತಿಜ್ಞೆ ಮಾಡಿತ್ತು. ಆದ್ದರಿಂದ ಹತ್ಯೆ ನಡೆದಿದೆ ಎನ್ನಲಾಗಿದೆ.

Join Whatsapp
Exit mobile version