ಲೆಬನಾನ್ ಮೇಲೆ ಇಸ್ರೇಲ್ ದಾಳಿ: 100 ಜನ ಮೃತ್ಯು, 400 ಮಂದಿಗೆ ಗಾಯ

Prasthutha|

- Advertisement -

ಲೆಬನಾನ್: ಇಸ್ರೇಲಿ ದಾಳಿಯಲ್ಲಿ 100 ಮಂದಿ ಮೃತಪಟ್ಟಿದ್ದು, 400ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಲೆಬನಾನ್ ಪ್ರಕಟಣೆಯಲ್ಲಿ ಬಹಿರಂಗಪಡಿಸಿದೆ.

ದಕ್ಷಿಣದ ಪಟ್ಟಣಗಳು ​​ಮತ್ತು ಹಳ್ಳಿಗಳ ಮೇಲೆ ಶತ್ರುಗಳ ದಾಳಿಗಳು ನಡೆದಿವೆ. ಈ ದಾಳಿಯಲ್ಲಿ 100 ಮಂದಿ ಸಾವನ್ನಪ್ಪಿದ್ದು 400ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಆರೋಗ್ಯ ಸಚಿವಾಲಯವು ಹೇಳಿಕೆಯಲ್ಲಿ ತಿಳಿಸಿದೆ.

- Advertisement -

ನಾವು ಲೆಬನಾನ್‌ನಲ್ಲಿ ನಮ್ಮ ದಾಳಿಯನ್ನು ತೀವ್ರಗೊಳಿಸುತ್ತಿದ್ದೇವೆ. ಉತ್ತರದ ನಿವಾಸಿಗಳನ್ನು ಸುರಕ್ಷಿತವಾಗಿ ಅವರ ಮನೆಗಳಿಗೆ ಹಿಂದಿರುಗಿಸುವ ನಮ್ಮ ಗುರಿಯನ್ನು ಸಾಧಿಸುವವರೆಗೆ ಕ್ರಮಗಳು ಮುಂದುವರಿಯುತ್ತವೆ ಎಂದು ಇಸ್ರೇಲಿ ರಕ್ಷಣಾ ಸಚಿವ ಯೋವ್ ಗ್ಯಾಲಂಟ್ ಇಂದು ತಮ್ಮ ಕಚೇರಿ ಪ್ರಕಟಿಸಿದ ವೀಡಿಯೊದಲ್ಲಿ ತಿಳಿಸಿದ್ದಾರೆ.



Join Whatsapp