Home ಟಾಪ್ ಸುದ್ದಿಗಳು ವಿಶ್ವಸಂಸ್ಥೆ ಅಧಿಕಾರಿಗಳಿಗೆ ವೀಸಾ ನಿರಾಕರಿಸಿದ ಇಸ್ರೇಲ್

ವಿಶ್ವಸಂಸ್ಥೆ ಅಧಿಕಾರಿಗಳಿಗೆ ವೀಸಾ ನಿರಾಕರಿಸಿದ ಇಸ್ರೇಲ್

ವಿಶ್ವಸಂಸ್ಥೆ ಅಧಿಕಾರಿಗಳಿಗೆ ವೀಸಾ ನಿರಾಕರಿಸಲು ಇಸ್ರೇಲ್ ಮುಂದಾಗಿದೆ. ವಿಶ್ವ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೋ ಗುಟೆರೆಸ್ ಗಾಝಾ ಮೇಲೆ ದಾಳಿಗೆ ಖಂಡನೆ ವ್ಯಕ್ತಪಡಿಸಿ ಯುದ್ಧದಿಂದ ಹಿಂದೆ ಸರಿಯಲು ಸಲಹೆ ನೀಡಿದ್ದಕ್ಕಾಗಿ ಇಸ್ರೇಲ್ ಈ ರೀತಿಯ ಉದ್ಧಟತನಕ್ಕೆ ಮುಂದಾಗಿದೆ.

ವಿಶ್ವಸಂಸ್ಥೆಯಲ್ಲಿರುವ ಇಸ್ರೇಲ್ ನ ರಾಯಭಾರಿ ಗಿಲಾಡ್ ಎರ್ಡಾನ್ ಈ ಬಗ್ಗೆ ಮಾಹಿತಿ ನೀಡಿರುವುದನ್ನು ಇಸ್ರೇಲ್ ಮಾಧ್ಯಮಗಳು ವರದಿ ಮಾಡಿವೆ.

ಗುಟೆರೆಸ್ ಅವರ ಹೇಳಿಕೆಯಿಂದಾಗಿ ನಾವು ವಿಶ್ವಸಂಸ್ಥೆ ಪ್ರತಿನಿಧಿಗಳಿಗೆ ವೀಸಾ ನಿರಾಕರಿಸುತ್ತಿದ್ದೇವೆ ಎಂದು ಎರ್ಡನ್ ಆರ್ಮಿ ರೇಡಿಯೋಗೆ ಮಾಹಿತಿ ನೀಡಿದ್ದಾರೆ. ಮಾನವೀಯ ವ್ಯವಹಾರಗಳ ಅಧೀನ ಕಾರ್ಯದರ್ಶಿ ಮಾರ್ಟಿನ್ ಗ್ರಿಫಿತ್ಸ್ ಗೆ ಈಗಾಗಲೇ ವೀಸಾ ನಿರಾಕರಿಸಿದ್ದೇವೆ ಎಂದು ಎರ್ಡನ್ ಆರ್ಮಿ ರೇಡಿಯೋಗೆ ತಿಳಿಸಿದ್ದಾರೆ.

ಮಂಗಳವಾರ ನಡೆದ ಯುಎನ್ ಭದ್ರತಾ ಮಂಡಳಿಯ ಸಭೆಯಲ್ಲಿ ಗುಟೆರೆಸ್ ಗಾಝಾ ಮೇಲೆ ನಿರಂತರವಾಗಿ ಬಾಂಬ್ ದಾಳಿ ನಡೆಸುತ್ತಿರುವ ಇಸ್ರೇಲ್ ಪಡೆಯ ನಡೆಯ ಬಗ್ಗೆ ವಿಶ್ವಸಂಸ್ಥೆ ಮುಖ್ಸ್ಥ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಇಸ್ರೇಲ್ ಪಡೆ ಗಾಝಾದಲ್ಲಿ ನಡೆಸುತ್ತಿರುವ ಬಾಂಬ್ ದಾಳಿ ಸಾವಿರಾರು ಜನರ ಸಾವಿಗೆ ಕಾರಣವಾಗಿದೆ. ಇದು ಅಂತಾರಾಷ್ಟ್ರೀಯ ಮಾನವೀಯತೆ ಕಾಯ್ದೆಯ ಸ್ಪಷ್ಟ ಉಲ್ಲಂಘನೆಯಾಗಿದೆ. ಇದೊಂದು ಕಳವಳಕಾರಿ ವಿಷಯವಾಗಿದೆ ಎಂದು ಹೇಳಿದ್ದರು. ಇನ್ನೂ ಹೆಚ್ಚಿನ ಅನಾಹುತ ಸಂಭವಿಸುವ ನೊದಲು ಯುದ್ಧದಿಂದ ಹಿಂದೆ ಸರಿಯುವಂತೆ ಸಲಹೆ ನೀಡಿದ್ದರು.

Join Whatsapp
Exit mobile version