ನಾಗ್ಪುರ: ವಿಜಯ ದಶಮಿ ಆಚರಣೆಯ ಹಿನ್ನೆಲೆಯಲ್ಲಿ ಇಸ್ರೇಲ್ ಕಾನ್ಸುಲೇಟ್ ಜನರಲ್ ಕೊಬ್ಬಿ ಶೋಷನಿ ಬಲಪಂಥೀಯ ಸಂಘಟನೆಯಾದ ಆರೆಸ್ಸೆಸ್ ನ ಪ್ರಧಾನ ಕಚೇರಿ ಭೇಟಿ ನೀಡಿ, ಆರ್ ಎಸ್ ಎಸ್ ಮುಖಂಡರೊಂದಿಗೆ ಚರ್ಚೆ ನಡೆಸಿದರು.
ಈ ಸಂದರ್ಭದಲ್ಲಿ ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ, ಮಹಾರಾಷ್ಟ್ರ ಅಸೆಂಬ್ಲಿ ವಿರೋಧ ಪಕ್ಷದ ನಾಯಕ ದೇವೇಂದ್ರ ಫಡ್ನವೀಸ್ ಅವರು ಕೊಬ್ಬಿ ಶೋಷನಿ ಅವರನ್ನು ಆರೆಸ್ಸೆಸ್ ನ ಸಾಂಪ್ರಾದಾಯಿಕ ಉಡುಗೆಯಲ್ಲಿ ಸ್ವಾಗತಿಸಿದರು.
ನಿನ್ನೆ ನಡೆದ ವಿಜಯದಶಮಿ ಕಾರ್ಯಕ್ರಮದಲ್ಲಿಯೂ ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಜೊತೆ ಶೋಷನಿ ಭಾಗವಹಿಸಿದ್ದರು.
ಪ್ರಸಕ್ತ ಭೇಟಿಯ ಸಂದರ್ಭದಲ್ಲಿ ಇಸ್ರೇಲ್ ಮತ್ತು ಭಾರತದ ನಡುವಿನ ಇತಿಹಾಸ, ಸಂಸ್ಕೃತಿ, ಆರ್ಥಿಕತೆ ಮತ್ತು ಪಾಲುದಾರಿಕೆ ಕುರಿತು ಚರ್ಚಿಸಲಾಗಿದೆ ಎಂದು ಮುಂಬೈನ ಇಸ್ರೇಲ್ ಕಾನ್ಸುಲೇಟ್ ಜನರಲ್ ಟ್ವೀಟ್ ಮೂಲಕ ಪ್ರತಿಕ್ರಿಯಿಸಿದ್ದಾರೆ.