Home ಟಾಪ್ ಸುದ್ದಿಗಳು ವಿಶ್ವಾಸದ ಕೊರತೆ: ರಕ್ಷಣಾ ಸಚಿವರನ್ನು ವಜಾಗೊಳಿಸಿದ ಇಸ್ರೇಲ್ ಪ್ರಧಾನಿ ನೆತನ್ಯಾಹು

ವಿಶ್ವಾಸದ ಕೊರತೆ: ರಕ್ಷಣಾ ಸಚಿವರನ್ನು ವಜಾಗೊಳಿಸಿದ ಇಸ್ರೇಲ್ ಪ್ರಧಾನಿ ನೆತನ್ಯಾಹು

ಜೆರುಸಲೇಂ: ಇಸ್ರೇಲ್ ನಲ್ಲಿ ನಡೆಯುತ್ತಿರುವ ಸೇನಾ ಕಾರ್ಯಾಚರಣೆಗಳ ನಿರ್ವಹಣೆಯ ಬಗ್ಗೆ ವಿಶ್ವಾಸದ ಕೊರತೆ ಉಲ್ಲೇಖಿಸಿ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ತಮ್ಮ ಸಂಪುಟದ ರಕ್ಷಣಾ ಸಚಿವ ಯೋವ್ ಗ್ಯಾಲಂಟ್ ಅವರನ್ನು ವಜಾಗೊಳಿಸಿದ್ದಾರೆ.


ಇಸ್ರೇಲ್ ವಿದೇಶಾಂಗ ಸಚಿವ ಇಸ್ರೇಲ್ ಕಾಟ್ಜ್ ಅವರನ್ನು ರಕ್ಷಣಾ ಸಚಿವರನ್ನಾಗಿ ನೇಮಕ ಮಾಡಲಾಗಿದೆ.


ಇತ್ತ ಗಿಡಿಯಾನ್ ಸಾರ್ ಅವರಿಗೆ ವಿದೇಶಾಂಗ ವ್ಯವಹಾರಗಳ ಖಾತೆಯನ್ನು ನೀಡಲಾಗಿದೆ ಎಂದು ಪ್ರಧಾನಿಮಂತ್ರಿಯವರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.


ಈ ಎಲ್ಲಾ ಬೆಳವಣಿಗೆಗಳ ನಡುವೆ ಇಸ್ರೇಲ್ ಸೇನೆ ನಡೆಸಿದ ವೈಮಾನಿಕ ದಾಳಿಯಿಂದ ಮಂಗಳವಾರ ಗಾಜಾ ಪಟ್ಟಿಯಲ್ಲಿ 30 ಜನರು ಮೃತಪಟ್ಟಿದ್ದಾರೆ. ಮೃತರಲ್ಲಿ ಹೆಚ್ಚಿನವರು ಮಹಿಳೆಯರು ಮತ್ತು ಮಕ್ಕಳು ಎಂದು ಪ್ಯಾಲೆಸ್ಟೀನ್ ನ ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ.

Join Whatsapp
Exit mobile version