ಇಸ್ರೇಲ್ ಪ್ರಧಾನಿಗೆ ಕೋವಿಡ್ ಪಾಸಿಟಿವ್ । ಭಾರತ ಭೇಟಿ ಅನುಮಾನ

Prasthutha|

ಜೆರುಸಲೇಂ: ಇಸ್ರೇಲ್ ಪ್ರಧಾನಿ ನಫ್ತಾಲಿ ಬೆನೆಟ್ ಅವರಿಗೆ ಕೋವಿಡ್ ಪಾಸಿಟಿವ್ ವರದಿ ಬಂದಿದೆ ಎಂದು ಮಾಧ್ಯಮ ಸಲಹೆಗಾರ ಸ್ಪಷ್ಟಪಡಿಸಿದ್ದು, ಮುಂದಿನ ತಿಂಗಳ ಭಾರತದ ಭೇಟಿಯ ಕುರಿತು ಅನುಮಾನ ವ್ಯಕ್ತಪಡಿಸಿದ್ದಾರೆ.

- Advertisement -

ಇಸ್ರೇಲ್ ಪ್ರಧಾನಿ ಬೆನೆಟ್ ಅವರು ಏಪ್ರಿಲ್ 3 ರಿಂದ 5 ರವರೆಗೆ ಭಾರತ ಭೇಟಿ ನಿಗದಿಪಡಿಸಲಾಗಿದ್ದು, ಕೋವಿಡ್ ಹಿನ್ನೆಲೆಯಲ್ಲಿ ಈ ಭೇಟಿಯನ್ನು ರದ್ದುಪಡಿಸುವ ಕುರಿತು ಇನ್ನೂ ಖಚಿತವಾಗಿಲ್ಲ ಎಂದು ಹೇಳಲಾಗಿದೆ.

ಈ ಮಧ್ಯೆ ಇಸ್ರೇಲ್ ಪ್ರಧಾನಿ ಆರೋಗ್ಯ ಸ್ಥಿರವಾಗಿದ್ದು, ಮನೆಯಿಂದಲೇ ಕೆಲಸ ಕಾರ್ಯಗಳನ್ನು ಮುಂದುವರಿಸಲಿದ್ದಾರೆ ಎಂದು ಕಚೇರಿ ಮೂಲಗಳು ತಿಳಿಸಿವೆ.

- Advertisement -

ಭಯೋತ್ಪಾದನೆ ದಾಳಿಯ ಕುರಿತು ಪ್ರಧಾನಿ ಬೆನೆಟ್ ಅವರು ಸೋಮವಾರ ಬೆಳಗ್ಗೆ ರಕ್ಷಣಾ ಸಚಿವ ಬೆನ್ನಿ ಗ್ಯಾಂಟ್ಜ್, ಆಂತರಿಕ ಭದ್ರತಾ ಸಚಿವ ಒಮರ್ ಬಾರ್ಲೆವ್, ಇಸ್ರೇಲ್ ರಕ್ಷಣಾ ಪಡೆಗಳ ಮುಖ್ಯಸ್ಥ ಅವಿವ್ ಕೊಹಾವಿ, ಶಿನ್ ಬೆಟ್ ಮುಖ್ಯಸ್ಥ ರೋನೆನ್ ಬಾರ್, ಪೊಲೀಸ್ ಮುಖ್ಯಸ್ಥ ಕೋಬಿ ಶಬ್ಟಾಯ್ ಮತ್ತು ಇತರೆ ಅಧಿಕಾರಿಗಳೊಂದಿಗೆ ಮೌಲ್ಯಮಾಪನ ಸಭೆಯನ್ನು ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.



Join Whatsapp